ದಾವಣಗೆರೆ: ‘ಕಾಯಮಾತಿ, ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆಯಂತಹ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 19ರಂದು ಸಾಂಕೇತಿಕ ಮುಷ್ಕರ, ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ’ ಎಂದು ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ನಿರ್ದೇಶಕ ಜಿ.ಪಿ. ಮಂಜು ತಿಳಿಸಿದರು.

‘ಅಂದು ಬೆಳಿಗ್ಗೆ 10ಕ್ಕೆ ಹೈಸ್ಕೂಲ್ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಜಯದೇವ ವೃತ್ತದಲ್ಲಿ ಸಾಂಕೇತಿಕವಾಗಿ ಮಾನವ ಸರಪಳಿ ನಿರ್ಮಿಸಲಾಗುವುದು. ನಂತರ ಅರುಣ ಸರ್ಕಲ್, ಕೋರ್ಟ್ ವೃತ್ತ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕಾಲ್ನಡಿಗೆ ಜಾಥಾ ಸಾಗಲಿದೆ. ಮಾರ್ಗಮಧ್ಯೆ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಹಲವು ವರ್ಷಗಳಿಂದ ವಿವಿಧ ಹಂತದ ಹೋರಾಟ ನಡೆಸಲಾಗಿದೆ. ಫೆಬ್ರುವರಿ ಯಿಂದ ಕೆಲಸ ಸ್ಥಗಿತಗೊಳಿಸಿ ಹೋರಾಟ ನಡೆಸುತ್ತಿರುವ ಕಾರಣಕ್ಕೆ ಹಲವರನ್ನು ಅಮಾನತು ಮಾಡಲಾಗಿದೆ. ಸರ್ಕಾರಿ ನೌಕರರೇ ಅಲ್ಲದಿದ್ದರೂ ಯಾವ ಆಧಾರದಲ್ಲಿ ಅಮಾನತು ಮಾಡಲಾಗಿದೆ ಎಂದು ಅರ್ಥ ಆಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದಾವಣಗೆರೆಯ ನಂತರ ಬೆಂಗಳೂರಿನಲ್ಲಿ ಹೋರಾಟ ಮುಂದುವರಿಸಲಾಗುವುದು’ ಎಂದು ತಿಳಿಸಿದರು.

ಸಂಘದ ಟಿ.ಎಸ್. ಗುರುಮೂರ್ತಿ, ಎಸ್. ಬಸವರಾಜ್, ಶಂಕರಗೌಡ ಪಾಟೀಲ್, ಡಿ. ಮಾರಪ್ಪ, ಡಿ.ಆರ್. ಭಾಸ್ಕರ್, ಶಿವಾನಂದಯ್ಯ, ವೃಷಭೇಂದ್ರಯ್ಯ, ವಿನಯ್ ಕುಮಾರ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-43-529712585

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.