ದಾವಣಗೆರೆ: ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ 24 ಎಕರೆ ಭತ್ತ ಹಾಗೂ 50ಕ್ಕೂ ಹೆಚ್ಚು ಅಡಿಕೆ ಮರಗಳಿಗೆ ಹಾನಿಯಾಗಿದೆ. ₹ 5.90 ಲಕ್ಷ ಮೌಲ್ಯದ ಬೆಳೆ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಹರಿಹರ ತಾಲ್ಲೂಕಿನಲ್ಲಿ 20 ಎಕರೆ ಭತ್ತ ಹಾಗೂ ದಾವಣಗೆರೆ ತಾಲ್ಲೂಕಿನಲ್ಲಿ 4 ಎಕರೆ ಭತ್ತ, ಅಡಿಕೆ ಮರಗಳು ಧರೆಗೆ ಉರುಳಿವೆ. ಎರಡು ತಾಲ್ಲೂಕು ವ್ಯಾಪ್ತಿಯಲ್ಲಿ ಅಂದಾಜು 2 ಮಿ.ಮೀ ಮಳೆಯಾಗಿದೆ.

ಬೇಸಿಗೆ ಹಂಗಾಮಿನ ಭತ್ತ ತೆನೆ ಕಟ್ಟಿದ್ದು, ಕೆಲವೇ ದಿನಗಳಲ್ಲಿ ಕಟಾವಿಗೆ ಬರಲಿದೆ. ಮಳೆಗಿಂತ ಜೋರಾಗಿ ಬೀಸಿದ ಬಿರುಗಾಳಿಗೆ ಭತ್ತ ಸಂಪೂರ್ಣ ಚಾಪೆ ಹಾಸಿದೆ. ಇದರಿಂದ ತೆನೆ ಹಾಳಾಗಲಿದ್ದು, ಮೇವು ಕೂಡ ಕೈಸೇರುವುದಿಲ್ಲ ಎಂದು ರೈತರು ಆತಂಕಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.