ದಾವಣಗೆರೆ: ನಗರದ ರಾಮ್ ಆ್ಯಂಡ್ ಕೋ ವೃತ್ತದಲ್ಲಿ ಶ್ರೀರಾಮ ಉತ್ಸವ ಸಮಿತಿಯಿಂದ ಮೇ 10ರಂದು ಶ್ರೀರಾಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯ ಅಮೋಘವರ್ಷ, ಈ ಬಾರಿ ಉಪಚುನಾವಣೆ ಕಾರಣಕ್ಕೆ ಉತ್ಸವವನ್ನು ಮುಂದೂಡಲಾಗಿತ್ತು ಎಂದರು.

ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ರಾಮ್ ಆ್ಯಂಡ್ ಕೋ ವೃತ್ತದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಸಂಜೆ 4.30ರಿಂದ 7ರವರೆಗೆ ಶ್ರೀರಾಮ, ಆಂಜನೇಯ ಹಾಗೂ ಶಿವಾಜಿ ಮಹಾರಾಜರ ಮೂರ್ತಿಗಳ ಮೆರವಣಿಗೆ ನಡೆಯಲಿದೆ. ಪಿ.ಜೆ.ಬಡಾವಣೆಯ ಶ್ರೀರಾಮ ದೇವಸ್ಥಾನದಿಂದ ಪ್ರಾರಂಭವಾಗುವ ಮೆರವಣಿಗೆ ಎವಿಕೆ ಕಾಲೇಜು ರಸ್ತೆ ಮೂಲಕ ಸಾಗಿ, ರಾಮ್ ಆ್ಯಂಡ್ ಕೋ ವೃತ್ತದಲ್ಲಿ ಸಮಾಪ್ತಿಯಾಗಲಿದೆ ಎಂದು ತಿಳಿಸಿದರು.

ರಾತ್ರಿ 7ರಿಂದ ಶ್ರೀರಾಮನ ಮೂರ್ತಿಗೆ ದೀಪಾಲಂಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಜರುಗಲಿವೆ ಎಂದರು.

ಸಮಿತಿಯ ಜಿ.ಹರೀಶ್, ಸಚ್ಚಿನ್, ಯಶವಂತ್, ನವೀನ್, ಆರ್.ಹರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.