ದಾವಣಗೆರೆ: ರಾತ್ರಿ ವೇಳೆ ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷ ಜೈಲು ಹಾಗೂ ₹ 31,000 ದಂಡ ವಿಧಿಸಿ ಆದೇಶಿಸಿದೆ.

ರಾಜಕುಮಾರ್ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ದಂಡದ ಮೊತ್ತವನ್ನು ಸಂತ್ರಸ್ತೆಗೆ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.

2024ರ ಫೆ.5ರಂದು ರಾತ್ರಿ 11ಕ್ಕೆ ಮನೆಗೆ ನುಗ್ಗಿದ ಅಪರಾಧಿ ಅತ್ಯಾಚಾರ ಎಸಗಿದ್ದ ಎಂದು ಮಹಿಳೆಯೊಬ್ಬರು ಹದಡಿ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ರಾಘವೇಂದ್ರ ಕೆ.ಎನ್. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ವಕೀಲ ಎ.ಎಂ. ಬಸವರಾಜ್ ಸರ್ಕಾರದ ಪರ ವಾದ ಮಂಡಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-43-690994586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.