ದಾವಣಗೆರೆ: ಕೀಲು ಮತ್ತು ಮೂಳೆ ಸಂಬಂಧಿ ಶಸ್ತ್ರಚಿಕಿತ್ಸೆಯಲ್ಲಿ ರೋಬೊಟಿಕ್ ತಂತ್ರಜ್ಞಾನ ಮಹತ್ವದ ಬದಲಾವಣೆ ತಂದಿದೆ. ಈ ಚಿಕಿತ್ಸೆ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಪ್ರಯತ್ನಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಮುಂದಾಗಿದೆ ಎಂದು ವೈದ್ಯ ಡಾ.ಲೋಕೇಶ್ ಎ. ತಿಳಿಸಿದರು.

‘ವೃದ್ಧರಲ್ಲಿ ಮೊಣಕಾಲು, ಸೊಂಟ, ಭುಜ ಸೇರಿದಂತೆ ಇತರ ಕೀಲು ಮತ್ತು ಮೂಳೆ ಸಂಬಂಧಿ ಸಮಸ್ಯೆಗಳು ಸಾಮಾನ್ಯವಾಗಿವೆ. ಸಮಯೋಚಿತ ಹಾಗೂ ನೂತನ ತಂತ್ರಜ್ಞಾನದಿಂದ ಕೂಡಿದ ಶಸ್ತ್ರಚಿಕಿತ್ಸಾ ವಿಧಾನಗಳು ಮಹತ್ತರ ಪಾತ್ರ ವಹಿಸುತ್ತಿವೆ. ನೋವು ನಿವಾರಣೆಯ ಜೊತೆಗೆ ಸಹಜ ಜೀವನಕ್ಕೆ ಅನುಕೂಲಕರವಾಗಿವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ರೋಬೊಟಿಕ್ ಶಸ್ತ್ರಚಿಕಿತ್ಸೆಗೆ ನೈಪುಣ್ಯತೆ ಅತ್ಯಗತ್ಯ. ರೋಬೋಟ್ ಖರೀದಿಸಿದ ಮಾತ್ರಕ್ಕೆ ಚಿಕಿತ್ಸೆ ಲಭ್ಯವಾಗುತ್ತದೆ ಎಂಬ ನಂಬಿಕೆ ತಪ್ಪು. ಇದರ ಬಳಕೆ ಹಾಗೂ ನಿರ್ವಹಣೆ ಕೂಡ ಮುಖ್ಯ. ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆ ಈ ಚಿಕಿತ್ಸೆಗೆ ಖ್ಯಾತಿ ಗಳಿಸಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-43-1178721921

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.