ದಾವಣಗೆರೆ: ಕೋಮುದ್ವೇಷ ಹರಡುವ ಉದ್ದೇಶದಿಂದ ದ್ವೇಷ ಭಾಷಣ ಮಾಡಿದವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆಯುತ್ತಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಅಕ್ತರ್ ರಜಾಕ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗೋವುಗಳ ರಕ್ಷಣೆಯ ಹೆಸರಿನಲ್ಲಿ ಅಲ್ಪಸಂಖ್ಯಾತರು ಹಾಗೂ ರೈತರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ದೂರಿದರು.

‘ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ತಡೆದು ದೌರ್ಜನ್ಯ ಎಸಗುತ್ತಿರುವ ಗುಂಪುಗಳಿಗೆ ರಾಜ್ಯ ಸರ್ಕಾರ ಬೆಂಬಲ ಸೂಚಿಸುತ್ತಿದೆ. ಗೋಮಾತೆಯ ರಕ್ಷಣೆಯ ನೆಪದಲ್ಲಿ ನಡೆಯುತ್ತಿರುವ ಪುಂಡಾಟಿಕೆಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದ್ವೇಷ ಭಾಷಣ ಮಾಡಿದವರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದೆ’ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆರೋಪಿಸಿದರು.

‘ಹಾಲು ಕೊಡದ ಹಾಗೂ ಕೃಷಿ ಕೆಲಸಕ್ಕೆ ಬಳಕೆಯಾಗದ ಜಾನುವಾರುಗಳ ಪಾಲನೆಗೆ ರೈತರು ಕಷ್ಟಪಡಬೇಕಿದೆ. ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೇ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಜಾನುವಾರುಗಳನ್ನು ಮಾರಾಟ ಮಾಡಲು ಮುಂದಾಗುವ ರೈತರಿಗೆ ಗೋರಕ್ಷಣೆಯ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ’ ಎಂದು ಕಿಡಿಕಾರಿದರು.

ಎಸ್ಡಿಪಿಐ ಜಿಲ್ಲಾ ಘಟಕದ ಉಪಾಧ್ಯಕ್ಷ ರಜ್ವಿ ರಿಯಾಜ್ ಅಹಮದ್, ಪ್ರಧಾನ ಕಾರ್ಯದರ್ಶಿ ಗೌಸ್ಪೀರ್, ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಕೋಶಾಧಿಕಾರಿ ಮೊಹಮ್ಮದ್ ಅಜರುದ್ದೀನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-43-1586074816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.