ದಾವಣಗೆರೆ: ಸಿದ್ದರಾಮಯ್ಯ ಅವರು ಅಧಿಕಾರ ಹಸ್ತಾಂತರಿಸುವ ಮೂಲಕ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಉನ್ನತ ನಾಯಕರ ವ್ಯಕ್ತಿತ್ವ ಹೇಗಿರುತ್ತದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ವರ್ಚಸ್ಸು ವೃದ್ಧಿಯಾಗಿದೆ ಎಂದು ಮಾಜಿ ಸಚಿವ ಡಾ.ಎಂ.ಸಿ. ಸುಧಾಕರ್ ಅಭಿಪ್ರಾಯಪಟ್ಟರು.

‘ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ ಅವರೇ ಬೆಂಬಲ ಸೂಚಿಸಿದ್ದಾರೆ. ಶನಿವಾರ ನಡೆಯಲಿರುವ ಪಕ್ಷದ ಶಾಸಕಾಂಗ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ನಡೆಸಿಕೊಂಡ ರೀತಿಯ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ಅವರು ಕಣ್ಣೀರು ಹಾಕಿ ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಎಂದಿಗೂ ಹೀಗೆ ನಡೆಸಿಕೊಂಡಿಲ್ಲ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ’ ಎಂದು ಅಸಮಾಧಾನ ಹೊರಹಾಕಿದರು.

‘ಕೆಪಿಸಿಸಿ ಅಧ್ಯಕ್ಷರಾಗುವ ಸಾಮರ್ಥ್ಯ ಸತೀಶ ಜಾರಕಿಹೊಳಿ ಅವರಿಗೆ ಇದೆ. ಕೆಪಿಸಿಸಿ ಸಾರಥ್ಯ ವಹಿಸಿಕೊಳ್ಳಲು ಅವರೇ ಮುಂದೆ ಬಂದಿದ್ದಾರೆ. ಬಾಗಲಕೋಟೆ ಉಪಚುನಾವಣೆಯ ಜವಾಬ್ದಾರಿ ತೆಗೆದುಕೊಂಡು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಅವರು ಕೆಪಿಸಿಸಿ ಅಧ್ಯಕ್ಷರಾದರೆ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-43-2062729668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.