ದಾವಣಗೆರೆ: ‘ಮಹಾನಗರ ಪಾಲಿಕೆ ವ್ಯಾಪ್ತಿಯ 31ನೇ ವಾರ್ಡ್ನ ಎಸ್ಒಜಿ ಕಾಲೊನಿ ಜನರು ಅನುಭವಿಸುತ್ತಿರುವ ಚರಂಡಿ, ಕೊಳಚೆ ನೀರಿನ ಸಮಸ್ಯೆಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸಬೇಕು’ ಎಂದು ಎಸ್ಒಜಿ ಕಾಲೊನಿ ನಿವಾಸಿ ಕೆ.ಎನ್. ಪ್ರಜ್ವಲ್ ಒತ್ತಾಯಿಸಿದರು.

‘ಶ್ರೀರಾಮನಗರದ 10,000 ಜನರು ಬಳಸುವಂತಹ ನೀರು ಎಸ್ಒಜಿ ಕಾಲೊನಿಯ ಖಾಸಗಿ ಜಮೀನಿನ ಮೂಲಕ ಹರಿದು ಭದ್ರಾ ನಾಲೆಗೆ ಸೇರುತ್ತಿರುವುದರಿಂದ ಸಾಕಷ್ಟು ಸಮಸ್ಯೆ ಆಗುತ್ತಿದೆ. ಮಹಾನಗರ ಪಾಲಿಕೆಯವರು ಕೂಡಲೇ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು’ ಎಂದು ಈಚೆಗೆ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ನೂರಾರು ವಿದ್ಯಾರ್ಥಿಗಳು ಅಭ್ಯಾಸ ಮಾಡುವಂತಹ ಶಾಲೆಗಳ ಪಕ್ಕದಲ್ಲೇ ನಿಲ್ಲುವ ಚರಂಡಿ ನೀರು ಈಗ ಕೆರೆಯಂತಾಗಿದೆ. ದುರ್ವಾಸನೆಯಿಂದ ಜನರು ವಾಸ ಮಾಡಲಾರದಂತಹ ಅಸಹನೀಯ ವಾತಾವರಣ ನಿರ್ಮಾಣವಾಗಿದೆ. 8–10 ವರ್ಷಗಳಿಂದಲೂ ಈ ಸಮಸ್ಯೆ ಇದ್ದು, ಯಾರೂ ಗಮನ ಹರಿಸುತ್ತಿಲ್ಲ. ಮಹಾನಗರ ಪಾಲಿಕೆಯವರು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ದೂರಿದರು.

‘ಚರಂಡಿ ನೀರು ಮುಂದೆ ಭದ್ರಾ ನಾಲೆ ಸೇರುತ್ತಿರುವುದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ. ನಾಲೆಯ ನೀರು ಬಳಕೆಗೆ ಯೋಗ್ಯವಾಗಿಲ್ಲ. ಇದರಿಂದ ಜನರ ಆರೋಗ್ಯದ ಮೇಲೆ ಭಾರಿ ದುಷ್ಪರಿಣಾಮ ಉಂಟಾಗಲಿದೆ. ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಶಾಸಕರು, ಸಂಸದರು, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಬೇಸರಿಸಿದರು.

ಕೆ.ಎನ್. ಚಂದ್ರಶೇಖರ್, ಕೆ.ಆರ್. ಜಯಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-43-1003398788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.