ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಇದುವರೆಗೆ ನಡೆದಿರುವ ನಾಲ್ಕು ಚುನಾವಣೆಗಳಲ್ಲಿ ಶೇ 75ಕ್ಕಿಂತ ಅಧಿಕ ಪ್ರಮಾಣದಲ್ಲಿ ಮತದಾನ ನಡೆದಿಲ್ಲ. ನಗರ ಪ್ರದೇಶದಲ್ಲಿ ಹೆಚ್ಚು ಜನ ವಿದ್ಯಾವಂತರೂ, ಪ್ರಜ್ಞಾವಂತರೂ ಇರುತ್ತಾರೆ ಎಂದು ಹೇಳಲಾಗುತ್ತದೆ. ಆದರೆ, ಮತದಾನ ಪ್ರಕ್ರಿಯೆಯಲ್ಲಿ ಪ್ರಜ್ಞಾವಂತಿಕೆ ಕಂಡುಬಂದಿಲ್ಲ.

ಕ್ಷೇತ್ರವು 1957ರಿಂದ 2004ರ ಸಾರ್ವತ್ರಿಕ ಚುನಾವಣೆವರೆಗೂ ‘ದಾವಣಗೆರೆ’ಯಾಗಿ ಗುರುತಿಸಿಕೊಂಡಿತ್ತು. 2008ರ ಚುನಾವಣೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆಯ ಬಳಿಕ ‘ದಾವಣಗೆರೆ ದಕ್ಷಿಣ’ ಕ್ಷೇತ್ರವಾಗಿ ರೂಪುಗೊಂಡಿತು.

1957ರಿಂದ 2023ರ ವರೆಗೆ ಒಟ್ಟು 15 ಚುನಾವಣೆಗಳು ನಡೆದಿವೆ. ಅಷ್ಟೂ ಚುನಾವಣೆಗಳ ಪೈಕಿ 1983ರಲ್ಲಿ ನಡೆದ ಶೇ 74.57 ಮತದಾನ ಪ್ರಮಾಣವೇ ಗರಿಷ್ಠ.

1989ರಲ್ಲಿ ನಡೆದ ಚುನಾವಣೆಯಲ್ಲಿ ಅತಿ ಕಡಿಮೆ ಅಂದರೆ ಶೇ 54.03 ರಷ್ಟು ಮತದಾನವಾಗಿದೆ. ಮತದಾನದ ಪ್ರಮಾಣವನ್ನು ಹೆಚ್ಚಿಸಲು ಪ್ರತಿ ಚುನಾವಣೆಯಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ, ಈ ಕ್ಷೇತ್ರದಲ್ಲಿ ಮತದಾನದ ಪ್ರಮಾಣ ಶೇ 60ರಿಂದ 65ರ ಸರಾಸರಿಯಲ್ಲಿಯೇ ಉಳಿದಿದೆ.

ಶೇ 70ರ ಗಡಿ ದಾಟಿಲ್ಲ: 008ರಲ್ಲಿ ದಾವಣಗೆರೆ ‘ದಕ್ಷಿಣ’ ಕ್ಷೇತ್ರ ರೂಪುಗೊಂಡಾಗಿನಿಂದ ನಡೆದ ಚುನಾವಣೆಗಳಲ್ಲಿ ಮತದಾನದ ಪ್ರಮಾಣವು ಶೇ 70ರ ಗಡಿ ದಾಟಿಲ್ಲ. 2023ರ ಚುನಾವಣೆಯಲ್ಲಿ ಶೇ 69.47 ಮತದಾನ ಆಗಿದ್ದೇ ಅತ್ಯಧಿಕ.

ದಾವಣಗೆರೆ ಕ್ಷೇತ್ರದಲ್ಲಿ 2004ರಲ್ಲಿ ನಡೆದ ಚುನಾವಣೆಯಲ್ಲಿ ಶೇ 55.35 ಮತದಾನ ಆಗಿದ್ದು, ಅತಿ ಕಡಿಮೆ ಪ್ರಮಾಣ ಎಂದು ದಾಖಲಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯದ ಮತಗಳೇ ಹೆಚ್ಚಿನ ಪ್ರಮಾಣದಲ್ಲಿವೆ. ಒಟ್ಟು 136 ಮತಗಟ್ಟೆಗಳ ಪೈಕಿ 50 ಮತಗಟ್ಟೆಗಳು ದಾವಣಗೆರೆ ಗ್ರಾಮಾಂತರ ಭಾಗದಲ್ಲಿವೆ. ತಾಲ್ಲೂಕಿನ 9 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಈ ಮತಗಟ್ಟೆಗಳು ಹರಡಿಕೊಂಡಿವೆ.

‘2023ರ ಚುನಾವಣೆಯೂ ಸೇರಿದಂತೆ ಈ ಹಿಂದಿನ ಬಹುತೇಕ ಚುನಾವಣೆಗಳಲ್ಲಿ ನಗರ ವ್ಯಾಪ್ತಿಯ ಮತಗಟ್ಟೆಗಳಿಗಿಂತ ಗ್ರಾಮೀಣ ಭಾಗದ ಮತಗಟ್ಟೆಗಳಲ್ಲೇ ಹೆಚ್ಚಿನ ಮತದಾನವಾಗಿದೆ. ನಗರ ವ್ಯಾಪ್ತಿಯಲ್ಲಿ ಜನರು ಮತದಾನಕ್ಕೆ ಹೆಚ್ಚಿನ ಆಸಕ್ತಿ ತೋರಿಲ್ಲ. ಹೀಗಾಗಿ ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ, ಸ್ವೀಪ್ (ಮತದಾರರ ಜಾಗೃತಿ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಸಮಿತಿ ಅಧ್ಯಕ್ಷ ಗಿತ್ತೆ ಮಾಧವ ವಿಠ್ಠಲರಾವ್ ತಿಳಿಸಿದರು.

‘ಇದು ಉಪಚುನಾವಣೆ ಆಗಿರುವು ದರಿಂದ ಇದೊಂದೇ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದೇವೆ. ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದ್ದು, ಅವರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ರಾಜಕೀಯ ನಾಯಕರೂ ಮತದಾನದ ಪ್ರಮಾಣ ಹೆಚ್ಚಿಸಲು ಶ್ರಮಿಸುವ ವಿಶ್ವಾಸ ಇದೆ’ ಎಂದು ಅವರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260321-43-148139633

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.