ದಾವಣಗೆರೆ: ರಾಜ್ಯದಲ್ಲಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಗೆಲ್ಲಬೇಕು. ಆಗ ಮಾತ್ರ ಮುಂದಿನ ಎರಡೂವರೆ ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಖಚಿತ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಅಭಿಪ್ರಾಯಪಟ್ಟರು.

ಇಲ್ಲಿನ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಬಿಜೆಪಿ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ವಿಸ್ತಾರಕರಿಗೆ ಗುರುವಾರ ಏರ್ಪಡಿಸಿದ್ದ ಅಭಿನಂದನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಮುಂದಿನ ಸಾರ್ವತ್ರಿಕ ಚುನಾವಣೆಯ ಬಳಿಕ ಬಿಜೆಪಿ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದೆ. ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂದು ಬಯಸುವ ಕಾರ್ಯಕರ್ತರು, ನಾಯಕರು ಉಪಚುನಾವಣೆಯಲ್ಲಿ ಶ್ರಮಪಟ್ಟು ದುಡಿಯಬೇಕು. ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಬೇಕು’ ಎಂದು ಹೇಳಿದರು.

‘ಕ್ಷೇತ್ರದ ಪ್ರತಿ ಬೂತ್ಗೆ ಪಕ್ಷದ 3 ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. ಇಷ್ಟಿದ್ದೂ ಚುನಾವಣೆಯಲ್ಲಿ ಪಕ್ಷ ಸೋಲು ಕಾಣಬಾರದು. ಪ್ರತಿಯೊಬ್ಬರು ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಬೂತ್ ಬಿಟ್ಟು ಕದಲಬಾರದು. ಕಮಲದ ಗುರುತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

‘ಬಿಜೆಪಿಯ ಗೆಲುವನ್ನು ಅಭ್ಯರ್ಥಿ ನಿರ್ಧರಿಸುವುದಿಲ್ಲ. ಪಕ್ಷ ನಿರ್ಧರಿಸುವ ಅಭ್ಯರ್ಥಿಯ ಪರವಾಗಿ ಎಲ್ಲರೂ ಕೆಲಸ ಮಾಡಬೇಕು. ಬಿಜೆಪಿ ಕಾರ್ಯಕರ್ತರ ಪಕ್ಷವೇ ಹೊರತು ನಾಯಕರ ಪಕ್ಷವಲ್ಲ. ಬೀದಿ ಸುತ್ತಿ, ಮನೆಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುವ ಕಾರ್ಯಕರ್ತರಿಗೆ ಶಾಸಕನನ್ನು ಸೃಷ್ಟಿ ಮಾಡುವ ಶಕ್ತಿ ಇದೆ’ ಎಂದು ಹೇಳಿದರು.

ದಿಕ್ಕು ಬದಲಿಸುವ ಚುನಾವಣೆ: ‘ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯು ರಾಜ್ಯ ರಾಜಕೀಯದ ದಿಕ್ಕು ಬದಲಿಸಲಿದೆ. ಪಕ್ಷವು ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಪಕ್ಷದ ಕಾರ್ಯಕರ್ತರು, ನಾಯಕರು ಒಗ್ಗೂಡಿ ಪಕ್ಷಕ್ಕೆ ದುಡಿಯೋಣ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದರು.

‘ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ. ಕಾರ್ಯಕರ್ತರೇ ಪಕ್ಷದ ಅತಿದೊಡ್ಡ ಶಕ್ತಿ. ಪಕ್ಷದ ಸ್ವಂತ ಶಕ್ತಿಯ ಮೇಲೆ ಕಮಲ ಅರಳಿಸುವ ಪ್ರಯತ್ನ ಮಾಡೋಣ. ರಾಜ್ಯದಲ್ಲಿ ಎಂದೇ ಚುನಾವಣೆ ಎದುರಾದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಪಕ್ಷದ ಮುಂದೆ ಸುವರ್ಣ ಅವಕಾಶವಿದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಕಾರ್ಯವೈಖರಿಯ ಬಗ್ಗೆ ಅವರದೇ ಪಕ್ಷದ ಶಾಸಕರಿಗೆ ತೃಪ್ತಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೇ ಕಾಲಾಹರಣ ಮಾಡಲಾಗುತ್ತಿದೆ. ಲಜ್ಜೆಗೆಟ್ಟ ಜನವಿರೋಧಿ ಸರ್ಕಾರದಿಂದ ಜನರು ಬೇಸತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್, ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಕರುಣಾಕರ ರೆಡ್ಡಿ, ಮಾಜಿ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ಬಸವರಾಜ ನಾಯ್ಕ, ಶಿವಯೋಗಿಸ್ವಾಮಿ, ಮುಖಂಡರಾದ ಬಿ.ಜೆ. ಅಜಯ್ಕುಮಾರ್, ಮೇಗರಾಜ್ ಹಾಜರಿದ್ದರು.

‘ಸೋತರೆ ಟಿಕೆಟ್ ಇಲ್ಲ’

‘ದಕ್ಷಿಣ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರಗಳ ಹೊಣೆಯನ್ನು ಪಕ್ಷದ ನಾಯಕರಿಗೆ ವಹಿಸಲಾಗುತ್ತದೆ. ಈ ಕೇಂದ್ರಗಳಲ್ಲಿ ಪಕ್ಷಕ್ಕೆ ಹೆಚ್ಚು ಮತ ಪಡೆಯಲು ವಿಫಲರಾದವರಿಗೆ 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್ ಎಚ್ಚರಿಕೆ ನೀಡಿದರು.

‘ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸೇರಿದಂತೆ ವೇದಿಕೆ ಮೇಲಿರುವ ಎಲ್ಲ ನಾಯಕರಿಗೆ 2ರಿಂದ3 ಶಕ್ತಿ ಕೇಂದ್ರಗಳ ಜವಾಬ್ದಾರಿಯನ್ನು ಜಿಲ್ಲಾ ಘಟಕದ ಅಧ್ಯಕ್ಷರು ನೀಡಬೇಕು. ಕಾರ್ಯಕರ್ತರ ಜತೆಗೆ ಇವರೂ ತಳಮಟ್ಟದಲ್ಲಿ ಕೆಲಸ ಮಾಡಬೇಕು. ಇವರು ಮಾತನಾಡುವುದರಲ್ಲಿ ನಿಷ್ಣಾತರು. ಯಾರ ಮಾತನ್ನೂ ಕೇಳಬೇಡಿ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.