ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಮುಖಂಡ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ ಉಮೇದುವಾರಿಕೆ ಸಲ್ಲಿಸಿದರು. ಪಕ್ಷದ ‘ಬಿ’ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಚುನಾವಣಾಧಿಕಾರಿಗೆ ನೀಡಿದರು.

‘ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಸ್ಲಿಂ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆ. 2013ರ ವಿಧಾನಸಭಾ ಚುನಾವಣೆಯಿಂದಲೂ ಪಕ್ಷದ ಎದುರು ಟಿಕೆಟ್ಗೆ ಬೇಡಿಕೆ ಸಲ್ಲಿಸಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷದ ‘ಬಿ’ ಫಾರಂ ಸಿಗುವ ಸಂಪೂರ್ಣ ವಿಶ್ವಾಸವಿದೆ’ ಎಂದು ನಾಮಪತ್ರ ಸಲ್ಲಿಕೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹಲವು ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದೇನೆ. ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮುಖಂಡರ ಸಭೆ ನಡೆಯುತ್ತಿದೆ. ನಾಯಕರು ನನ್ನೊಂದಿಗೂ ಚರ್ಚೆ ನಡೆಸಿದ್ದಾರೆ. ಸಮರ್ಥ ಶಾಮನೂರು ಸೇರಿದಂತೆ ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪಕ್ಷದ ‘ಬಿ’ ಫಾರಂ ಜೊತೆಗೆ ಸೋಮವಾರ ಮತ್ತೊಂದು ನಾಮಪತ್ರ ಸಲ್ಲಿಸಲಿದ್ದೇನೆ. ಒಂದು ವೇಳೆ ಟಿಕೆಟ್ ಕೈತಪ್ಪಿದರೆ ಹಿತೈಷಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ

–ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಮುಖಂಡ..

.ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿಜೆಪಿ ಶ್ರೀನಿವಾಸ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ.ದಾವಣಗೆರೆ ದಕ್ಷಿಣ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.