ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆ ಆಗಿದೆ.

ಮಾಹಿತಿ ತಂತ್ರಜ್ಞಾನದಲ್ಲಿ ಎಂಜಿನಿಯರಿಂಗ್ ಪದವೀಧರ ಆಗಿರುವ ಶ್ರೀನಿವಾಸ್ ಅವರು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವರು. ಶ್ರೀನಿವಾಸ್ ಅವರ ತಂದೆ ದಾಸಕರಿಯಪ್ಪ ಅವರು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) ಅಧ್ಯಕ್ಷರಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದಾರೆ.

ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ 45 ವರ್ಷದ ಇವರು, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವರ್ತಕರಾಗಿ, ವಿದ್ಯುತ್ ಗುತ್ತಿಗೆದಾರರಾಗಿ ವೃತ್ತಿ ಬದುಕು ಕಟ್ಟಿಕೊಂಡಿದ್ದಾರೆ.

ದಾವಣಗೆರೆ ವಿನೋಬನಗರದ ಚೌಡೇಶ್ವರಿ ದೇವಸ್ಥಾನ ಮಂಡಳಿಯ ಅಧ್ಯಕ್ಷರಾಗಿ ಜೀರ್ಣೋದ್ಧಾರಕ್ಕೆ ಶ್ರಮಿಸಿದ್ದಾರೆ. ಜಿಲ್ಲಾ ವಾಲ್ಮೀಕಿ ಸಮುದಾಯದ ಯುವ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಜೆಪಿಯಲ್ಲಿ ಶ್ರೀನಿವಾಸ್ ದಾಸಕರಿಯಪ್ಪ ಸೇರಿದಂತೆ 8 ಜನ ಟಿಕೆಟ್ ಆಕಾಂಕ್ಷಿಗಳಿದ್ದರು. ಕ್ಷೇತ್ರದ ಪರಾಭವ ಅಭ್ಯರ್ಥಿಗಳಾಗಿದ್ದ ಬಿ.ಜಿ. ಅಜಯ್ಕುಮಾರ್ ಹಾಗೂ ಯಶವಂತರಾವ್ ಜಾಧವ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಉಪಚುನಾವಣೆ ಕುರಿತು ಚರ್ಚಿಸಿದ ಬಿಜೆಪಿ ರಾಜ್ಯ ಕೋರ್ ಕಮಿಟಿ ಈ ಮೂವರ ಹೆಸರುಗಳನ್ನು ಬಿಜೆಪಿ ರಾಷ್ಟ್ರೀಯ ಘಟಕಕ್ಕೆ ಶಿಫಾರಸ್ಸು ಮಾಡಿತ್ತು.

ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಜೊತೆಗೆ ಗುರುತಿಸಿಕೊಂಡಿರುವ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆ ಆಗಿರುವುದು ಆ ಬಣದ ಕೈ ಮೇಲಾಗಿದೆ. ಅಜಯ್ಕುಮಾರ್ ಅವರಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಲಾಬಿ ನಡೆಸಿದ್ದರು. ಈ ನಡುವೆ ಸ್ವಾಭಿಮಾನಿ ಬಳಗದ ಸಂಸ್ಥಾಪಕ ಜಿ.ಬಿ.ವಿನಯ್ಕುಮಾರ್ ಹೆಸರು ಕೂಡ ಚಾಲ್ತಿಗೆ ಬಂದಿತ್ತು.
.ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ.ದಾವಣಗೆರೆ ವಿಧಾನಸಭಾ ಕ್ಷೇತ್ರ: 11 ಬಾರಿ ಗೆದ್ದು ಬೀಗಿದ ಕಾಂಗ್ರೆಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.