ದಾವಣಗೆರೆ: ಯುಗಾದಿ ಹಬ್ಬದ ಚಂದ್ರದರ್ಶನದ ಶುಭದಿನವಾದ ಶುಕ್ರವಾರ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮತ್ತು ಕಾಂಗ್ರೆಸ್ನ ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ 8 ಜನ ಅಭ್ಯರ್ಥಿಗಳು 9 ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಪಕ್ಷದ ‘ಬಿ’ ಫಾರಂ ಜೊತೆಗೆ ಸೋಮವಾರ ಮತ್ತೊಂದು ಸುತ್ತಿನ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಸೇರಿ ನಾಲ್ವರು ಉಮೇದುವಾರಿಕೆ ಸಲ್ಲಿಸಿದರು. ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ತಾಯಿ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಜೊತೆ ಬಂದ ಸಮರ್ಥ, ಪಕ್ಷದ ‘ಬಿ’ ಫಾರಂ ಸಿಗುವ ವಿಶ್ವಾಸದಲ್ಲಿ ಉಮೇದುವಾರಿಕೆ ಸಲ್ಲಿಸಿದರು.

ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾದ 3 ದಿನಗಳಲ್ಲಿ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು. ನಾಮಪತ್ರ ಸಲ್ಲಿಕೆಗೆ ಮಾರ್ಚ್ 23 ಅಂತಿಮ ದಿನ. ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣಕ್ಕೆ ಶುಕ್ರವಾರ, ಕಾಂಗ್ರೆಸ್, ಬಿಜೆಪಿ, ಆಮ್ ಆದ್ಮಿ ಪಾರ್ಟಿ (ಎಎಪಿ) ಅಭ್ಯರ್ಥಿಗಳು ಹಾಗೂ ಐವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಅವರ ಪುತ್ರ 27 ವರ್ಷದ ಸಮರ್ಥ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಪಕ್ಷವು ಟಿಕೆಟ್ ಘೋಷಿಸುವ ಮೊದಲೇ ಉಮೇದುವಾರಿಕೆ ಸಲ್ಲಿಸಿದ್ದು ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪಕ್ಷೇತರರಾಗಿ ಅವರು ಎರಡು ಪ್ರತಿ ನಾಮಪತ್ರಗಳನ್ನು ಚುನಾವಣಾಧಿಕಾರಿಗೆ ಸಲ್ಲಿಸಿದರು.

‘ಕಾಂಗ್ರೆಸ್ ‘ಬಿ’ ಫಾರಂ ಸಿಗುವ ಸಂಪೂರ್ಣ ವಿಶ್ವಾಸವಿದೆ. ಶುಭಗಳಿಗೆ ಎಂದು ನಾಮಪತ್ರ ಸಲ್ಲಿಸಿದ್ದೇನೆ. ಸೋಮವಾರ ಮತ್ತೊಮ್ಮೆ ರಾಜ್ಯ ನಾಯಕರೊಂದಿಗೆ ಉಮೇದುವಾರಿಕೆ ನೀಡಲಿದ್ದೇನೆ’ ಎಂದು ಸಮರ್ಥ ಶಾಮನೂರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ನಡುವೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಾದಿಕ್ ಪೈಲ್ವಾನ್ ಕೂಡ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ‘ಬಿ’ ಫಾರಂ ಸಿಗುವ ವಿಶ್ವಾಸದಲ್ಲಿ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.