ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಅನ್ನು ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ನೀಡಬೇಕು ಎಂದು ಎಂ.ಟಿ. ಸುಭಾಷ್ಚಂದ್ರ ಅವರು ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

‘ಒಂದು ವೇಳೆ ಮುಸ್ಲಿಂ ಅಭ್ಯರ್ಥಿಯನ್ನು ಕಡೆಗಣಿಸಿ ಶಾಮನೂರು ಕುಟುಂಬದ ಸಮರ್ಥ ಅವರಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ಗೆ ಸಂಕಷ್ಟ ಎದುರಾಗಲಿದೆ. ಅದು ಮುಸ್ಲಿಂ ಮತ್ತು ಹಿಂದುಳಿದ ವರ್ಗಗಳ ಅಸಮಾಧಾನಕ್ಕೆ ಕಾರಣವಾಗಬಹುದು. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸೇರಿದಂತೆ ಇತರ ಪಕ್ಷಗಳು ಇದರ ಪ್ರಯೋಜನ ಪಡೆಯಲಿವೆ. ಕೇರಳ, ಪಶ್ಚಿಮ ಬಂಗಾಳ ಚುನಾವಣೆಯ ಮೇಲೆ ಕೂಡ ಪರಿಣಾಮ ಬೀರಲಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘2008 ರಲ್ಲಿ ದಾವಣಗೆರೆಯಲ್ಲಿ ನಾಟಕೀಯ ಬೆಳವಣಿಗೆ ನಡೆಯಿತು. ಪಕ್ಷದ ಅಧಿಕೃತ ಅಭ್ಯರ್ಥಿ ಸೈಯದ್ ಸೈಫುಲ್ಲಾ ಅವರಿಗೆ ಕೆಪಿಸಿಸಿ ಹೆಲಿಕಾಪ್ಟರ್ ಮೂಲಕ ‘ಬಿ’ ಫಾರಂ ಕಳುಹಿಸಿತ್ತು. ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಅವರ ಬೆಂಬಲಿಗರು ಬೆದರಿಕೆ ಹಾಕಿ ನಾಮಪತ್ರ ಸಲ್ಲಿಕೆಗೆ ಅಡ್ಡಿಪಡಿಸಿದ್ದರು’ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

‘ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ 70,000 ಮತದಾರರಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವಿನಲ್ಲಿ ಮುಸ್ಲಿಂ ಸಮುದಾಯದ ಪಾತ್ರವಿದೆ. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮೂರು ಅವಧಿಗೆ ಕೆಲಸ ಮಾಡಿರುವ ವಿಧಾನಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರನ್ನು ಟಿಕೆಟ್ಗೆ ಪರಿಗಣಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.