ದಾವಣಗೆರೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗಿದ್ದು, ಮೊದಲ ಹಂತದಲ್ಲಿ ಜಿಲ್ಲೆಯ ಯಾವೊಬ್ಬ ಶಾಸಕರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಅವಕಾಶ ಕೈತಪ್ಪಿತೇ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಮಹತ್ವದ ಖಾತೆಗಳು ದಕ್ಕಿದ್ದವು. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ ಸಚಿವ ಸಂಪುಟ ಕೂಡ ವಿಸರ್ಜನೆಯಾಗಿತ್ತು. ನೂತನ ಸರ್ಕಾರದಲ್ಲಿ ಜಿಲ್ಲೆಯ ಯಾರಿಗೆ ಅದೃಷ್ಟ ಒಲಿದು ಬರಲಿದೆ ಎಂಬ ನಿರೀಕ್ಷೆ ಗರಿಗೆದರಿತ್ತು.

ಹೊನ್ನಾಳಿಯ ಡಿ.ಜಿ. ಶಾಂತನಗೌಡ ಹಾಗೂ ಉತ್ತರ ವಿಧಾನಸಭಾ ಕ್ಷೇತ್ರದ ಎಸ್.ಎಸ್. ಮಲ್ಲಿಕಾರ್ಜುನ್ ಜಿಲ್ಲೆಯ ಅನುಭವಿ ಶಾಸಕರು. 4 ಬಾರಿ ಶಾಸಕರಾಗಿ ಆಯ್ಕೆಯಾದ ಮಲ್ಲಿಕಾರ್ಜುನ್ ಅವರು ಎಸ್.ಎಂ. ಕೃಷ್ಣ ಸಚಿವ ಸಂಪುಟದಲ್ಲಿ ಒಮ್ಮೆ ಹಾಗೂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ನೂತನ ಸರ್ಕಾರದಲ್ಲಿ ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ಸಿಗುವ ಅತೀವ ವಿಶ್ವಾಸ ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿದ್ದು, ಸಂಪುಟ ವಿಸ್ತರಣೆಯನ್ನು ಎದುರು ನೋಡುವಂತಾಗಿದೆ.

ಶಾಂತನಗೌಡ ಅವರು ಮೂರು ಬಾರಿ ಶಾಸಕರಾದರೂ ಒಮ್ಮೆಯೂ ಸಚಿವ ಸ್ಥಾನದ ಅದೃಷ್ಟ ಕೈಹಿಡಿದಿಲ್ಲ. ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆಯ ಪ್ರಯತ್ನ ನಡೆಯುತ್ತಿರುವ ಸಂದರ್ಭಗಳಲ್ಲಿ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಚನ್ನಗಿರಿಯ ಬಸವರಾಜು ವಿ. ಶಿವಗಂಗಾ, ಮಾಯಕೊಂಡದ ಕೆ.ಎಸ್. ಬಸವಂತಪ್ಪ, ಜಗಳೂರಿನ ಬಿ. ದೇವೇಂದ್ರಪ್ಪ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮರ್ಥ್ ಶಾಮನೂರು ಇದೇ ಮೊದಲ ಬಾರಿಗೆ ಶಾಸಕರಾಗಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಳೆಯದಲ್ಲಿ ಗುರುತಿಸಿಕೊಂಡಿರುವ ಬಸವರಾಜು, ಸಚಿವ ಸ್ಥಾನದ ಆಕಾಂಕ್ಷಿ ಎಂಬುದಾಗಿ ಘೋಷಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ. ಜೆ.ಎಚ್. ಪಟೇಲ್ ಬಳಿಕ ಚನ್ನಗಿರಿ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಮುಂದಿಟ್ಟು ಹೈಕಮಾಂಡ್ಗೆ ಬೇಡಿಕೆ ಸಲ್ಲಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-43-165206014

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.