ದಾವಣಗೆರೆ: ‘ಸಂವಿಧಾನದ ಆಶಯಗಳು ಬಸವಾದಿ ಶಿವಶರಣರ ವಚನಗಳನ್ನೇ ಆಧರಿಸಿವೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಜಿಲ್ಲೆಯ ಹಾಸ್ಟೆಲ್ಗಳ ವಿದ್ಯಾರ್ಥಿಗಳಲ್ಲಿ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ’ ಎಂದು ತಿಳಿಸಿದರು.

‘ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದಿಂದಲೇ ಬಂಡಾಯ, ಹಳೆಗನ್ನಡ, ದಲಿತ ಸಾಹಿತ್ಯ ಮೊದಲಾದವುಗಳ ಪರಿಚಯ, ಶರಣರು, ದಾರ್ಶನಿಕರ ಚಿಂತನೆ ಮೂಡಿಸಲು ಉಪನ್ಯಾಸ ಕಾರ್ಯಕ್ರಮ ಆರಂಭಿಸಲಾಗುವುದು’ ಎಂದು ಹೇಳಿದರು.

‘ಶೈಕ್ಷಣಿಕ ಪಠ್ಯಕ್ರಮ ಓದುವುದಷ್ಟೇ ಶಿಕ್ಷಣವಲ್ಲ. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆ ಬೆಳೆಸಿಕೊಳ್ಳಬೇಕು. ಎಲ್ಲರಿಗೂ ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಸಾಧ್ಯವಿಲ್ಲ. ತಾವಿರುವ ಹುದ್ದೆಗಳಿಂದಲೇ ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದರು.

‘ರೈತ, ದಲಿತ ಸಂಘಟನೆಗಳಿಲ್ಲದೆ ಹೋಗಿದ್ದರೆ ಆಡಳಿತ ಯಂತ್ರದ ಕಿವಿ ಕೇಳಿಸುತ್ತಿರಲಿಲ್ಲ. ಈ ಸಂಘಟನೆಗಳಿಗೆ ಧ್ವನಿ ತುಂಬಿದ ಅಂಬೇಡ್ಕರ್ ಅವರು ಎಲ್ಲರ ಸ್ಮೃತಿ ಪಟಲದಲ್ಲೂ ಜೀವಂತವಿದ್ದಾರೆ’ ಎಂದು ಹೇಳಿದರು.

‘ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿಗೆ ಸ್ಫೂರ್ತಿಯಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಸಂವಿಧಾನ ಪೀಠಿಕೆಯನ್ನು ಭೋದಿಸಿದರು.

ಎಸ್ಪಿ ಎಚ್.ಟಿ. ಶೇಖರ್, ಜಿಲ್ಲಾ ಪಂಚಾಯಿತಿ ಉಪಕಾರ್ಯ ದರ್ಶಿ ಮಮತಾ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್ ಹಾಗೂ ಇನ್ನಿತರರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ನಡೆಯಿತು. ದಲಿತ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-43-1290521197

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.