ದಾವಣಗೆರೆ: ಹರಿಹರ ತಾಲ್ಲೂಕಿನ ಪ್ರೊ.ಬಿ.ಕೃಷ್ಣಪ್ಪ ಮೆಮೋರಿಯಲ್ ಹಾಲ್ನಲ್ಲಿ ಏಪ್ರಿಲ್ 23 ರಿಂದ 26ರ ವರೆಗೆ ವಿದ್ಯಾರ್ಥಿ ಚಳವಳಿಯ ಮುಖಂಡರಿಗಾಗಿ ರಾಜ್ಯಮಟ್ಟದ ಅಧ್ಯಯನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ನ (ಎಸ್ಎಫ್ಐ) ರಾಜ್ಯ ಘಟಕದ ಉಪಾಧ್ಯಕ್ಷ ಬಸವರಾಜ ಎಸ್. ತಿಳಿಸಿದರು.

ಸಾಹಿತಿ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಬಿ.ಶ್ರೀನಿವಾಸ ಅವರು ಅಧ್ಯಯನ ಶಿಬಿರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಎ.ಬಿ. ರಾಮಚಂದ್ರಪ್ಪ, ಪತ್ರಕರ್ತ ಬಿ.ಎನ್. ಮಲ್ಲೇಶ್, ಎಸ್ಎಫ್ಐ ಮುಖಂಡರಾದ ಸುಜಾತಾ ವೈ., ಗಣೇಶ ರಾಠೋಡ್, ದೊಡ್ಡ ಬಸವರಾಜ ಗುಳೆದಾಳ ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎಸ್ಎಫ್ಐ ರಾಜ್ಯ ಘಟಕದ ಕಾರ್ಯದರ್ಶಿ ವಿಜಯಕುಮಾರ್ ಟಿ.ಎಸ್. ಪ್ರಾಸ್ತಾವಿಕ ವಾಗಿ ಮಾತನಾಡಿದರು. ಶಿವಪ್ಪ ಅಂಬ್ಲಿಕಲ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದರು.

ಜಾತಿ ಉಗಮ, ಬೆಳವಣಿಗೆ ಹಾಗೂ ಸವಾಲುಗಳು, ಸ್ವಾತಂತ್ರ್ಯ ಹೋರಾಟದ ನಂತರದ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಬೆಳವಣಿಗೆ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ವಿದ್ಯಾರ್ಥಿಗಳ ಪಾತ್ರ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

‘ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗುವುದು. ಬಲಿಷ್ಠ ವಿದ್ಯಾರ್ಥಿ ಚಳವಳಿ ರೂಪಿಸಲು ಕಾರ್ಯಯೋಜನೆ ಹಾಕಿಕೊಳ್ಳಲಾಗುವುದು’ ಎಂದು ಹೇಳಿದರು.

‘ವಿದ್ಯಾರ್ಥಿ ಸಮುದಾಯವನ್ನು ವೈಚಾರಿಕವಾಗಿ, ಸೈದ್ಧಾಂತಿಕವಾಗಿ ಜಾಗೃತಿಗೊಳಿಸುತ್ತಾ, ಅವರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು ಎಸ್ಎಫ್ಐ ಶ್ರಮಿಸುತ್ತಿದೆ’ ಎಂದು ರಾಜ್ಯ ಘಟಕದ ಕಾರ್ಯದರ್ಶಿ ವಿಜಯಕುಮಾರ್ ಟಿ.ಎಸ್. ತಿಳಿಸಿದರು.

‘ರಾಜ್ಯದಾದ್ಯಂತ ವಿದ್ಯಾರ್ಥಿ ಸಮುದಾಯಕ್ಕಾಗಿ ವಿಚಾರ ಸಂಕಿರಣ, ಸಂವಾದ, ಕ್ರೀಡೆ- ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಸಮಸ್ಯೆಗಳ ಕುರಿತು ಜಾಗೃತಿ ಜಾಥಾಗಳನ್ನು ಆಯೋಜನೆ ಮಾಡಲಾಗಿದೆ’ ಎಂದರು.

ಎಸ್ಎಫ್ಐ ರಾಜ್ಯ ಘಟಕದ ಉಪಾಧ್ಯಕ್ಷ ದೊಡ್ಡ ಬಸವರಾಜ ಗುಳೆದಾಳ, ಜಿಲ್ಲಾ ಘಟಕದ ಸಂಚಾಲಕ ಅನಂತರಾಜ್, ಮುಖಂಡ ಕೃಷ್ಣ ಎನ್. ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-43-2071552737

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.