ತಾವರೆಕೆರೆ (ಚನ್ನಗಿರಿ): ‘ದೇವಾಲಯಗಳದ ಕಳಸ ದರ್ಶನದಿಂದ ಸಕಲ ದೇವತೆಗಳ ದರ್ಶನ ಪುಣ್ಯ ಲಭಿಸುತ್ತದೆ’ ಎಂದು ಉಜ್ಜಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಶುಕ್ರವಾರ ನಡೆದ ಉಮಾಮಹೇಶ್ವರ ಸ್ವಾಮಿ ಹಾಗೂ ವೀರಭದ್ರ ಸ್ವಾಮಿ ದೇವಾಲಯಗಳ ಕಳಸಾರೋಹಣ, ಬೆಳ್ಳಿ ಕವಚ ಸಮರ್ಪಣೆ, ಕೆಂಡಾರ್ಚನೆ, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕೊಲ್ಲಿಪಾಕಿ ಕ್ಷೇತ್ರ ದರ್ಶನ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ತಾವರೆಕೆರೆ ಶಿಲಾಮಠ ಐತಿಹಾಸಿಕ ಪರಂಪರೆ ಹೊಂದಿದೆ. ಇಲ್ಲಿನ ವೀರಭದ್ರ ಸ್ವಾಮಿ ದೇವಾಲಯವು ರಾಜರ ಕಾಲದಲ್ಲಿ ನಿರ್ಮಾಣಗೊಂಡಿದೆ. ಅಪೂರ್ಣವಾಗಿದ್ದ ಗೋಪುರ ನಿರ್ಮಾಣ ಕಾರ್ಯವನ್ನು ಹಿರಿಯ ಶ್ರೀಗಳಾದ ರೇಣುಕಾ ಶಿವಾಚಾರ್ಯರ ತಪಸ್ಸು, ತ್ಯಾಗ ಮತ್ತು ಸಂಕಲ್ಪದ ಫಲವಾಗಿ ಇದೀಗ ಪೂರ್ಣಗೊಳಿಸಿ ಕಳಸಾರೋಹಣ ನೆರವೇರಿಸಲಾಗಿದೆ. ಅರ್ಧ ಶತಮಾನ ಮಠದ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಅರ್ಪಿಸಿದ್ದ ರೇಣುಕಾ ಶಿವಾಚಾರ್ಯ ಮಹಾಸ್ವಾಮಿಗಳವರ 52ನೇ ವರ್ಧಂತಿ ಅಂಗವಾಗಿ ನಡೆದ ಈ ಮಹೋತ್ಸವ ಐತಿಹಾಸಿಕ ಕ್ಷಣವಾಗಿದ್ದು, ಶತಮಾನಗಳ ಹಿಂದಿನ ಬಾಕಿ ಉಳಿದ ಧಾರ್ಮಿಕ ಕಾರ್ಯಕ್ಕೆ ಯುವಪೀಳಿಗೆ ಸಾಕ್ಷಿಯಾಗಿದೆ ಎಂದರು.

‘ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸಮಾನತೆ, ಸರಳತೆ ಹಾಗೂ ಸಾಮಾಜಿಕ ಕ್ರಾಂತಿಗೆ ಕಾರಣವಾಗುತ್ತವೆ. ಮದುವೆಯಲ್ಲಿ ಭಾಗವಹಿಸಿರುವ ದಂಪತಿ ಆದರ್ಶ ದಾಂಪತ್ಯ ಜೀವನ ನಡೆಸಿ, ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು. ಆಗ ಇಂತಹ ಕಾರ್ಯಕ್ರಮಗಳಿಗೆ ಸಾರ್ಥಕತೆ ದೊರೆಯುತ್ತದೆ’ ಎಂದು ಸಲಹೆ ನೀಡಿದರು.

ಯಡಿಯೂರು ಕ್ಷೇತ್ರದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ, ಹುಣಸಘಟ್ಟ ಹಾಲಸ್ವಾಮಿ ಮಠದ ಗುರುಮೂರ್ತಿ ಸ್ವಾಮೀಜಿ, ನಂದಿಪುರ ಹಿರೇಮಠದ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ಅಣ್ಣೆ ಹಿರೇಮಠದ ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯರು, ಬೀರೂರು ರಂಭಾಪುರಿ ಶಾಖಾ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಬೆಂಗಳೂರಿನ ಕಂಠೀರವ ಸ್ಟುಡಿಯೊ ಅಧ್ಯಕ್ಷ ಮೆಹಬೂಬ್ ಪಾಷಾ, ಶಾಸಕ ಬಸವರಾಜು ಶಿವಗಂಗಾ, ಮಾಜಿ ಶಾಸಕ ಮಹಿಮ ಪಟೇಲ್, ಸ್ವಾಭಿಮಾನಿ ನಾಯಕ ಯುವ ವೇದಿಕೆ ಅಧ್ಯಕ್ಷ ನವೀನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-43-502837931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.