ದಾವಣಗೆರೆ: ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಮತ್ತು ಕಾರ್ಮಿಕರ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ್ ತಿಳಿಸಿದರು.

‘ಸಾರಿಗೆ ನೌಕರರು ಮತ್ತು ಕಾರ್ಮಿಕರ ವಿಚಾರದಲ್ಲಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ರಚಿಸಿ ವೇತನ ಹೆಚ್ಚಿಸಿದೆ. ಆದರೆ, ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆಗೆ ಇನ್ನೂ ಆಸಕ್ತಿ ತೋರಿಲ್ಲ. ಸರ್ಕಾರದ ಏಕಪಕ್ಷೀಯ ನಿರ್ಧಾರ ಹಾಗೂ ಧೋರಣೆ ವಿರೋಧಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸಿ ಹೊಸ ವೇತನಶ್ರೇಣಿ ರಚಿಸಬೇಕು. 2020ರಲ್ಲಿ ಬಾಕಿ ಉಳಿಸಿಕೊಂಡ ಹಲವು ತಿಂಗಳ ವೇತನವನ್ನು ತಕ್ಷಣ ಪಾವತಿಸಬೇಕು. ಒಂದೇ ಕಂತಿನಲ್ಲಿ ಹಿಂಬಾಕಿ ನೀಡಲು ಪ್ರಯತ್ನಿಸಬೇಕು. ರಾಜ್ಯ ಸರ್ಕಾರ ಹಠಮಾರಿ ಧೋರಣೆ ಕೈಬಿಡಬೇಕು. ಇಲ್ಲವಾದರೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು’ ಎಂದರು.

ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಿರ್ಜಾ ರಹಮತ್ ಉಲ್ಲಾ, ಸಂಘಟನಾ ಕಾರ್ಯದರ್ಶಿ ಆನಂದ ನಾಯ್ಕ, ಈಶ್ವರ ಬಣವಿ, ದಿಳ್ಳೆಪ್ಪ ಕಾಂಬ್ಳೆ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-43-218530030

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.