ದಾವಣಗೆರೆ: ಹಳೆ ದಾವಣಗೆರೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯ ರೋಗಿಗಳು ಭೇಟಿ ನೀಡುವುದರಿಂದ ಯಾರನ್ನೂ ಹೆಚ್ಚು ಸಮಯ ಕಾಯಿಸದೇ ಸಮರ್ಪಕ ಸೇವೆ ನೀಡಬೇಕು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೂಚಿಸಿದರು.

ನಗರದ ಚಾಮರಾಜಪೇಟೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದರು.

‘ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ವೈದ್ಯರು ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು. ಆಸ್ಪತ್ರೆಯ ಸೇವೆಯನ್ನು ಕಡೆಗಣಿಸಿ ಖಾಸಗಿ ಕ್ಲಿನಿಕ್ಗಳಿಗೆ ಆದ್ಯತೆ ನೀಡುವ ವೈದ್ಯರು ತಕ್ಷಣವೇ ಸೇವೆಯಿಂದ ನಿರ್ಗಮಿಸಬಹುದು’ ಎಂದು ಸೂಚಿಸಿದರು.

‘ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿದ್ದು, ಪಿಜಿ ವೈದ್ಯರೇ ಹೆಚ್ಚಿನ ರೋಗಿಗಳ ತಪಾಸಣೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ದೂರು ಬಂದಿವೆ. ಈ ಬಗ್ಗೆ ತಕ್ಷಣ ಗಮನಹರಿಸಬೇಕು. ಔಷಧ ಉಗ್ರಾಣದ ಸಮಸ್ಯೆಗಳ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು. ಸಮಸ್ಯೆಗಳನ್ನು ತಿಳಿಸಿದರೆ ಮಾತ್ರ ಅವುಗಳನ್ನು ಬಗೆಹರಿಸಲು ಸಾಧ್ಯ’ ಎಂದು ಹೇಳಿದರು.

ಲ್ಯಾಬ್ ತಂತ್ರಜ್ಞರಿಂದ ಸಮರ್ಪಕ ಮಾಹಿತಿ ದೊರೆಯದಿರುವುದು ಹಾಗೂ ರೋಗಿಗಳು ರಸೀದಿ ಹಿಡಿದು ಓಡಾಡುವ ಪರಿಸ್ಥಿತಿ ಇರುವ ಕುರಿತು ಬಂದಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸೇವಾ ಮನೋಭಾವ ಹೊಂದಿರುವ ವೈದ್ಯರನ್ನು ನೇಮಿಸಿ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ಆಡಳಿತದ ಜವಾಬ್ದಾರಿ’ ಎಂದು ಸ್ಥಳದಲ್ಲಿದ್ದ ಡಿಎಚ್ಒಗೆ ತಿಳಿಸಿದರು.

ಬೇಸಿಗೆಯಲ್ಲಿ ರೋಗಿಗಳ ಅನುಕೂಲಕ್ಕಾಗಿ ಫ್ಯಾನ್ ಅಳವಡಿಕೆ, ಮಹಿಳೆಯರ ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿ ನಿರ್ಮಿಸುವ ಕುರಿತು ಬೇಡಿಕೆ ಕೇಳಿಬಂದಿವೆ. ನಿರ್ಮಿತಿ ಕೇಂದ್ರದ ಎಂಜಿನಿಯರ್ ಅವರಿಂದ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಆಸ್ಪತ್ರೆಯಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡಲಾಗುವುದು. ರಾತ್ರಿ ವೇಳೆ ಸುರಕ್ಷತೆಗಾಗಿ ಪೊಲೀಸ್ ಸಿಬ್ಬಂದಿ ನಿಯೋಜನೆ ಕುರಿತು ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಸಾಮಗ್ರಿಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಡಿಎಚ್ಒ ಡಾ. ಷಣ್ಮುಖಪ್ಪ ಹಾಗೂ ಆಸ್ಪತ್ರೆಯ ಅಧೀಕ್ಷಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-43-2092928888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.