ದಾವಣಗೆರೆ: ‘ಬಿಜೆಪಿಗೆ ಮಹಿಳೆಯರ ಬೆಂಬಲ ಜಾಸ್ತಿ ಇದೆ ಎಂಬ ಕಾರಣಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರೋಧಿಸುತ್ತಿದ್ದಾರೆ. ದಾವಣಗೆರೆ ಸಂಸದರು ಈ ಮಸೂದೆ ಬಗ್ಗೆ ಯಾವುದೇ ನಿಲುವು ಸ್ಪಷ್ಟಪಡಿಸಿಲ್ಲ. ಅವರು ಮಹಿಳಾ ಮೀಸಲಾತಿ ಮಸೂದೆಯ ಪರವಾಗಿದ್ದಾರೋ ಅಥವಾ ವಿರುದ್ಧವಿದ್ದಾರೋ ಎಂಬುದನ್ನು ತಿಳಿಸಬೇಕು ಎಂದು ಸ್ವಾಭಿಮಾನಿ ಬಳಗದ ಅಧ್ಯಕ್ಷ ಬಿ.ಜಿ.ವಿನಯಕುಮಾರ್ ಕೋರಿದರು.

‘ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆಯಿಂದ ಯಾವುದೇ ರಾಜ್ಯಗಳಿಗೆ ತೊಂದರೆಯಾಗುವುದಿಲ್ಲ. ದಾವಣಗೆರೆ ಕ್ಷೇತ್ರವನ್ನು ಹಿಂದುಳಿದ ವರ್ಗದ ಮಹಿಳೆಗೆ ಮೀಸಲಿಡಬೇಕು. ವಿಧಾನಸಭೆ ಚುನಾವಣೆಗಳಲ್ಲೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಬೇಕು’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ನಾರಿಶಕ್ತಿ ವಂದನಾ ಅಧಿನಿಯಮ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದು ಸರಿಯಲ್ಲ. ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಿಸಿ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವುದು ಐತಿಹಾಸಿಕ ನಿರ್ಧಾರ’ ಎಂದು ಅವರು ಅಭಿಪ್ರಾಯಪಟ್ಟರು.

‘ಹಾಲಿ ಸಂಸದರು, ಶಾಸಕರ ಕುಟುಂಬದವರಿಗೇ ಪಕ್ಷಗಳು ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣ ಹೆಚ್ಚಾಗುತ್ತದೆ. ಮಹಿಳಾ ಮೀಸಲಾತಿ ಜಾರಿಯಾದ ಬಳಿಕ ರಾಜಕೀಯ ಹಿನ್ನೆಲೆಯಿಲ್ಲದ ಸಾಮರ್ಥ್ಯ ಇರುವ ಮಹಿಳೆಯರಿಗೆ ಆದ್ಯತೆ ಮೇರೆಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.

‘ಬಿಜೆಪಿ ಸೇರ್ಪಡೆ ಬಗ್ಗೆ ಇನ್ನೂ ಮಾತುಕತೆ ನಡೆಯುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ದಾವಣಗೆರೆ ಉತ್ತರ ಅಥವಾ ಹೊನ್ನಾಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವುದು ನಿಜ. ಈ ಬಗ್ಗೆ ರಾಷ್ಟ್ರಮಟ್ಟದ ನಾಯಕರೊಂದಿಗೂ ಸಂಪರ್ಕವಿದೆ. ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಪಕ್ಷ ಬೇರೆಯವರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.

ಸ್ವಾಭಿಮಾನಿ ಬಳಗದ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ವಿರೂಪಾಕ್ಷಪ್ಪ, ರಂಗಸ್ವಾಮಿ, ರೇವಂತ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-43-745001494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.