ದಾವಣಗೆರೆ: ಬಂಡವಾಳಶಾಹಿ ವ್ಯವಸ್ಥೆ ತನ್ನ ಲಾಭವನ್ನು ಹೆಚ್ಚಿಸಿಕೊಳ್ಳಲು ದುಡಿಯುವ ಜನರ ಮೇಲೆ ಕೆಲಸದ ಹೊರೆ ಹೆಚ್ಚಿಸುತ್ತಿದೆ. 8 ಗಂಟೆಗಳ ಕೆಲಸದ ಅವಧಿಯನ್ನು 12 ಗಂಟೆಗೆ ಏರಿಕೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಎಐಯುಟಿಯುಸಿ ರಾಜ್ಯ ಘಟಕದ ಅಧ್ಯಕ್ಷ ಸೋಮಶೇಖರ್ ಕೆ. ಹೇಳಿದರು.

ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಎಐಯುಟಿಯುಸಿ ಹಾಗೂ ಕೆನರಾ ಬ್ಯಾಂಕ್ ಸ್ಟಾಫ್ ಫೆಡರೇಷನ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಆಳುವ ವರ್ಗವು ಕಾರ್ಮಿಕರ ಹಕ್ಕುಗಳ ಮೇಲೆ ನೇರ ದಾಳಿ ನಡೆಸುತ್ತಿದೆ. ದಶಕಗಳ ಹೋರಾಟಗಳಿಂದ ಪಡೆದ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ, 4 ಕಾರ್ಮಿಕ ಸಂಹಿತೆಗಳ ಹೆಸರಿನಲ್ಲಿ ಕಾರ್ಮಿಕ ವಿರೋಧಿ ನೀತಿಗಳನ್ನು ಹೇರಲಾಗಿದೆ. ಉದ್ಯೋಗದ ಭದ್ರತೆಯನ್ನು ಕಿತ್ತುಕೊಳ್ಳಲಾಗುತ್ತಿದೆ. ಗುತ್ತಿಗೆ ಹಾಗೂ ಗಿಗ್ ಕಾರ್ಮಿಕ ವ್ಯವಸ್ಥೆಯನ್ನು ಕಾನೂನುಬದ್ಧಗೊಳಿಸುವ ಮೂಲಕ ಕಾಯಂ ಉದ್ಯೋಗದ ಪರಿಕಲ್ಪನೆಯನ್ನು ದುರ್ಬಲಗೊಳಿಸಲಾಗಿದೆ’ ಎಂದು ಅಸಮಾಧಾನ ಹೊರಹಾಕಿದರು.

‘ಕಾರ್ಮಿಕರ ಮುಷ್ಕರದ ಹಕ್ಕಿನ ಮೇಲೂ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಈ ಸಂಹಿತೆಗಳನ್ನು ಜಾರಿಗೆ ತರುತ್ತಿವೆ. ಸಂಘ ಕಟ್ಟುವ ಹಕ್ಕನ್ನು ದುರ್ಬಲಗೊಳಿಸಲಾಗುತ್ತಿದೆ’ ಎಂದರು.

‘ರಾಜ್ಯ ಸರ್ಕಾರ ಕೂಡ ಈ ಕಾಯ್ದೆಗಳಿಗೆ ನಿಯಮಗಳನ್ನು ರೂಪಿಸಿ ಕಾರ್ಯಗತಗೊಳಿಸುವ ತರಾತುರಿಯಲ್ಲಿದೆ. ಲಕ್ಷಾಂತರ ಗುತ್ತಿಗೆ ಕಾರ್ಮಿಕರ ಸೇವಾಭದ್ರತೆ ಹಾಗೂ ಕಾಯಂಗೊಳಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ. ಪರಿಷ್ಕರಿಸಬೇಕಾದ ಕನಿಷ್ಠ ವೇತನದ ಬಗ್ಗೆ ನಿಲುವು ತೆಗೆದುಕೊಂಡಿಲ್ಲ. ಆಶಾ, ಅಂಗನವಾಡಿ ಹಾಗೂ ಬಿಸಿಯೂಟ ಸಿಬ್ಬಂದಿ ವೇತನ ಹೆಚ್ಚಿಸುವ ಗೊಡವೆಗೆ ಹೋಗದೆ ಶೋಷಣೆಗೆ ಗುರಿ ಮಾಡಲಾಗಿದೆ’ ಎಂದು ದೂರಿದರು.

ಕೆನರಾ ಬ್ಯಾಂಕ್ ಸ್ಟಾಫ್ ಫೆಡರೇಷನ್ ಮುಖಂಡ ಎಂ.ಆರ್. ಹಿರೇಮಠ, ಮಂಜುನಾಥ ಕುಕ್ಕುವಾಡ, ತಿಪ್ಪೇಸ್ವಾಮಿ ಅಣಬೇರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-43-1985842940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.