ದಾವಣಗೆರೆ: ‘ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಂಡಿರುವ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸಾವಿರಾರು ಜನರು ತೆರಳುತ್ತಿದ್ದೇವೆ. ಇದಕ್ಕೆ 104 ಬಸ್ ಹಾಗೂ 500ಕ್ಕೂ ಹೆಚ್ಚು ಕಾರು, ವಾಹನಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ತಿಳಿಸಿದರು.

‘ಯಡಿಯೂರಪ್ಪ ಅವರು ರಾಜ್ಯದಲ್ಲಿ ಪಕ್ಷ ಕಟ್ಟಿದ್ದಾರೆ. ದಕ್ಷಿಣ ಭಾರತದಲ್ಲಿ ಮೊಟ್ಟಮೊದಲು ಕಮಲ ಅರಳುವಂತೆ ಮಾಡಿದ್ದಾರೆ. ಸೈಕಲ್ನಲ್ಲಿ ಸಂಚರಿಸಿ ಪಕ್ಷಕ್ಕೆ ದುಡಿದಿದ್ದಾರೆ. ಕುಟುಂಬ ಹಮ್ಮಿಕೊಂಡ ಉತ್ಸವಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು ಹೋಗುತ್ತಿದ್ದೇವೆ. ಪ್ರತಿ ಹಳ್ಳಿಯಿಂದ ಜನರನ್ನು ಕರೆತರಲು ಮೂವರು ಕಾರ್ಯಕರ್ತರಿಗೆ ಜವಾಬ್ದಾರಿ ನೀಡಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಯಡಿಯೂರಪ್ಪ ಅವರು ನಾಲ್ಕು ಬಾರಿ ಮುಖ್ಯಮಂತ್ರಿ, ಒಮ್ಮೆ ಉಪಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ರೈತ ನಾಯಕರಾಗಿದ್ದ ಅವರು ಅಧಿಕಾರಕ್ಕೆ ಬಂದ ಬಳಿಕ ರೈತ ಪರ ಯೋಜನೆಗಳನ್ನು ರೂಪಿಸಿದ್ದರು. ಹೆಣ್ಣು ಮಕ್ಕಳಿಗಾಗಿ ಅನುಷ್ಠಾನಕ್ಕೆ ತಂದ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಗೆ ಜನಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದುರ್ಗದ ನಮ್ಮ ಕುಟುಂಬದ ಒಡೆತನದ 23 ಎಕರೆ ಜಾಗದಲ್ಲಿ ಉತ್ಸವ ನಡೆಯುತ್ತಿದೆ’ ಎಂದರು.

ಮಾಜಿ ಶಾಸಕ ಎಚ್.ಪಿ. ರಾಜೇಶ್, ಮುಖಂಡರಾದ ಶ್ರೀನಿವಾಸ ದಾಸಕರಿಯಪ್ಪ, ಮುರುಗೇಶ್ ಆರಾಧ್ಯ, ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ದೇವರಮನಿ ಶಿವಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-1658878086

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.