ದಾವಣಗೆರೆ: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಮಾಗನಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದಿದೆ.

ಮಾಗನಹಳ್ಳಿಯ ಆಕಾಶ್ ಬಿ.ಜಿ. (17) ಮೃತ ಯುವಕ.

ಸ್ನೇಹಿತರೊಂದಿಗೆ ಈಜಾಡುವ ವೇಳೆ ಆಕಾಶ್ ಆಕಸ್ಮಿಕವಾಗಿ ಆಳವಾದ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ಸ್ನೇಹಿತರು ರಕ್ಷಿಸಲು ಮುಂದಾದರೂ ಸಾಧ್ಯವಾಗಿಲ್ಲ.

‘ಆಕಾಶ್ಗೆ ಈಜು ಬರುತ್ತಿತ್ತು. ಕೆಸರಿನಲ್ಲಿ ಸಿಲುಕಿದ್ದರಿಂದ ಮೇಲೆ ಬರಲಾಗದೇ ಉಸಿರುಗಟ್ಟಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ಸೋಮವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದರು. ಸ್ಥಳದಲ್ಲಿ ಮೃತ ಯುವಕನ ಕುಟುಂಬದವರು, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-43-1004778185

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.