ದಾವಣಗೆರೆ: ಇಲ್ಲಿನ ಮಟ್ಟಿಕಲ್ನ ಗಣೇಶಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಅಳವಡಿಸಿದ್ದ ಆಕ್ಷೇಪಾರ್ಹ ಫ್ಲೆಕ್ಸ್ ತೆರವುಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಆರೋಪದಡಿ ಪಿಎಸ್ಐ ಹಾಗೂ ಇಬ್ಬರು ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ್ ಬಿರಾದಾರ, ಕಾನ್ಸ್ಟೆಬಲ್ಗಳಾದ ಷಣ್ಮುಖ ಹಾಗೂ ವತ್ಸಲಾ ಅಮಾನತುಗೊಂಡವರು.

ವೀರ ಸಾವರ್ಕರ್ ಯುವಕರ ಸಂಘದಿಂದ ಗಣೇಶಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಶಿವಾಜಿ ಮಹಾರಾಜ್ ಹಾಗೂ ಅಫ್ಜಲ್ ಖಾನ್ ನಡುವಿನ ಯುದ್ಧದ ಸನ್ನಿವೇಶ ಬಿಂಬಿಸುವಂತಹ ಆಕ್ಷೇಪಾರ್ಹ ಫ್ಲೆಕ್ಸ್ ಅಳವಡಿಸಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಲವರು, ಕೋಮುಭಾವನೆ ಕೆರಳಿಸುವಂತಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

ಫ್ಲೆಕ್ಸ್ ತೆರವಿಗೆ ಮುಂದಾಗಿದ್ದ ಪೊಲೀಸರೊಂದಿಗೆ ಯುವಕರು ವಾಗ್ವಾದ ನಡೆಸಿದ್ದರು. ಇದರಿಂದ ಗುರುವಾರ ಮಧ್ಯರಾತ್ರಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಶುಕ್ರವಾರ ಫ್ಲೆಕ್ಸ್ ತೆರವು ಗೊಳಿಸಿದ್ದರಲ್ಲದೆ, ಹಿಂದೂ ಜಾಗರಣಾ ವೇದಿಕೆಯ ಮುಖಂಡ ಸತೀಶ್ ಪೂಜಾರಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.