ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ವೈದ್ಯರ ಮೇಲೆ ಹಲ್ಲೆ: ವ್ಯಕ್ತಿ ಬಂಧನ

Published : 24 ಆಗಸ್ಟ್ 2024, 16:21 IST
Last Updated : 24 ಆಗಸ್ಟ್ 2024, 16:21 IST
ಫಾಲೋ ಮಾಡಿ
Comments

ದಾವಣಗೆರೆ: ಇಲ್ಲಿನ ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಬಡಾವಣೆ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ದಾವಣಗೆರೆಯ ರವಿಕುಮಾರ್‌ ಬಂಧಿತ ಆರೋಪಿ. ನ್ಯಾಯಾಧೀಶರ ಎದುರು ಹಾಜರುಪಡಿಸಿದ ಪೊಲೀಸರು, ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಡಾ.ಸನ್ನಿದಿ ನಾಯ್ಕ, ಡಾ.ಡಿ.ಎಸ್‌.ನಿಶಾಂತ್‌ ಹಾಗೂ ಡಾ.ಅಂಕುಶ್‌ ಅವರು ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಶುಕ್ರವಾರ ರಾತ್ರಿ ಪಾಳಿಯಲ್ಲಿ ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಲ್ಲೆ ನಡೆದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಆರೋಪಿ ರವಿಕುಮಾರ್‌ ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ರಿ ತಾನ್ವಿ (4) ಹಾಗೂ ಪತ್ನಿ ಉಷಾ ಅವರೊಂದಿಗೆ ಶುಕ್ರವಾರ ಮಧ್ಯರಾತ್ರಿ ಆಸ್ಪತ್ರೆಗೆ ಬಂದಿದ್ದರು. ಬಾಲಕಿಯ ಆರೋಗ್ಯ ಪರೀಕ್ಷಿಸಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು. ಕೆಲ ಸಮಯದ ಬಳಿಕ ಬಾಲಕಿಯ ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿತ್ತು. ಚಿಕಿತ್ಸೆ ನೀಡುತ್ತಿರುವಾಗ ಐಸಿಯುಗೆ ನುಗ್ಗಿದ ರವಿಕುಮಾರ್‌, ವೈದ್ಯರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು’ ಎಂದು ಠಾಣೆಗೆ ನೀಡಿದ ದೂರಿನಲ್ಲಿ ವೈದ್ಯರು ತಿಳಿಸಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತಾನ್ವಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT