ದಾವಣಗೆರೆ: ತಾಲ್ಲೂಕಿನ ಹದಡಿ ರಸ್ತೆಯ ಜಮೀನಿನಲ್ಲಿ ಸುಟ್ಟು ಭಸ್ಮವಾದ ಕಾರಿನಲ್ಲಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ಚಂದ್ರಶೇಖರ ಸಂಕೋಳ್ (56) ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ತಾಲ್ಲೂಕಿನ ಬಿಸ್ಲೇರಿ ಗ್ರಾಮದ ಜಮೀನಿಗೆ ಶನಿವಾರ ರಾತ್ರಿ ತೆರಳಿದ್ದ ಅವರು, ಭಾನುವಾರ ಬೆಳಿಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾರಿನೊಂದಿಗೆ ಮೃತದೇಹ ಸಂಪೂರ್ಣ ಭಸ್ಮವಾಗಿದ್ದು, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನದ ಆಧಾರದ ಮೇರೆಗೆ ಹದಡಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಗರ ಪಾಲಿಕೆಯ 43 ನೇ ವಾರ್ಡ್ ಕಾರ್ಪೊರೇಟರ್ ಆಗಿದ್ದ ಚಂದ್ರಶೇಖರ್ ಸಂಕೋಳ್, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ವಿಪರೀತ ಸಾಲ ಮಾಡಿಕೊಂಡ ವಿಚಾರದಲ್ಲಿ ಕೌಟುಂಬಿಕ ಕಲಹ ಉಂಟಾಗಿತ್ತು. ಇದರಿಂದ ಮನನೊಂದ ಪುತ್ರ ನರೇಶ್ (22) ಹಾಗೂ ಪುತ್ರಿ ಪವಿತ್ರಾ (24) ಆತ್ಮಹತ್ಯೆಗೆ ಯತ್ನಿಸಿದ್ದರು. ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಬಳಿಕ ಚಂದ್ರಶೇಖರ್ ಜಮೀನಿಗೆ ತೆರಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಸುಟ್ಟ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಇರುವ ಬಗ್ಗೆ ಸಾರ್ವಜನಿಕರು ಭಾನುವಾರ ಮಾಹಿತಿ ನೀಡಿದರು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೂಳೆಗಳು ಮಾತ್ರ ಪತ್ತೆಯಾಗಿವೆ. ಚಂದ್ರಶೇಖರ ಸಂಕೋಳ್ ಮೃತಪಟ್ಟಿರುವ ಅನುಮಾನದ ಮೇರೆಗೆ ತನಿಖೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ಪ್ರಯೋಗಾಯಲದ ಸಿಬ್ಬಂದಿ ಮಾದರಿಗಳನ್ನು ಸಂಗ್ರಹಿಸಿದ್ದು, ಪರೀಕ್ಷೆಯ ಬಳಿಕ ಮೃತರ ಗುರುತು ಪತ್ತೆಯಾಗಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

‘ನಿಯಮಿತವಾಗಿ ಮನೆಗೆ ಬಾರದ ತಂದೆಯ ಜೊತೆಗೆ ಮಕ್ಕಳು ಶನಿವಾರ ಸಂಜೆ ಗಲಾಟೆ ಮಾಡಿದ್ದಾರೆ. ದೂರವಾಣಿ ಕರೆ ಮಾಡಿ ತಕ್ಷಣ ಮನೆಗೆ ಬರುವಂತೆ ಪಟ್ಟು ಹಿಡಿದಿದ್ದಾರೆ. ಕಲಹದ ಬಳಿಕ ಮಕ್ಕಳಿಬ್ಬರು ಕೊಠಡಿಗೆ ತೆರಳಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಇದನ್ನು ಗಮನಿಸಿದ ಕುಟುಂಬದ ಸದಸ್ಯರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಪವಿತ್ರಾ ಪರಿಸ್ಥಿತಿ ಗಂಭೀರವಾಗಿದೆ. ವಿಷಯ ತಿಳಿದು ಚಂದ್ರಶೇಖರ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.