ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಹಾಗೂ ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಪುತ್ರ ಹಸನ್ (27) ಹಾಗೂ ಹಸನ್ ಸ್ನೇಹಿತ ಫೈಜಾನ್ (27) ಬಂಧಿತರು.

ಗುಂಪುಗಳ ನಡುವೆ ನಡೆದ ಗಲಾಟೆ ಹಾಗೂ ಪೊಲೀಸರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಆಜಾದ್ ನಗರ ಪೊಲೀಸ್ ಠಾಣೆ ಹಾಗೂ ಬಡಾವಣೆ ಠಾಣೆಯಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಡಿವೈಎಸ್ಪಿ ಬಿ.ಶರಣ ಬಸವೇಶ್ವರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ರೌಡಿಗಳಿಗೂ ಮೀರಿದ ವರ್ತನೆ:

ಆಸ್ಪತ್ರೆ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಅಯೂಬ್ ಪೈಲ್ವಾನ್ ಪುತ್ರರು ರೌಡಿಗಳಿಗೂ ಮೀರಿದ ವರ್ತನೆ ತೋರಿರುವ ದೃಶ್ಯ ವಿಡಿಯೊಗಳಲ್ಲಿ ಸೆರೆಯಾಗಿದೆ. ಆರೋಪಿಗಳಾದ ಹಸೇನ್, ಹುಸೇನ್ ಹಾಗೂ ಸಂಬಂಧಿಕ ಹಮ್ಜಾ ಪೊಲೀಸರು ಎನ್ನುವ ಯಾವ ಭಯವೂ ಇಲ್ಲದೇ ದುರ್ವರ್ತನೆ ತೋರಿದ್ದಾರೆ.

ಅಯೂಬ್ ಪೈಲ್ವಾನ್ ಪುತ್ರರಾದ ಹಸೇನ್ ಹಾಗೂ ಹುಸೇನ್, ಪೊಲೀಸ್ ಸಿಬ್ಬಂದಿ ಮುಖಕ್ಕೆ ಡಿಚ್ಚಿ ಹೊಡೆದು ದರ್ಪ ತೋರಿದ್ದಾರೆ. ಈ ವೇಳೆ ಸಿಬ್ಬಂದಿಯ ರಕ್ಷಣೆಗೆ ಮುಂದಾದ ಬಡಾವಣೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಾಯತ್ರಿ ಆರ್. ಅವರ ಮೇಲೂ ಹಲ್ಲೆ ನಡೆಸಿದ್ದಾರೆ.

‘ಗಲಾಟೆ ಬಳಿಕ ಸ್ಥಳಕ್ಕೆ ಬಂದ ಅಯೂಬ್ ಪೈಲ್ವಾನ್ ಕೂಡ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ, ಅಯೂಬ್ ಪೈಲ್ವಾನ್ ಕುಟುಂಬದ ಮಹಿಳೆಯರು ಹಸೇನ್ ಹಾಗೂ ಹುಸೇನ್ ಅವರನ್ನು ಮನೆಯೊಳಗೆ ಕರೆದುಕೊಂಡು ಹಿಂಬಾಗಿಲಿನಿಂದ ಓಡಿ ಹೋಗುವಂತೆ ಮಾಡಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.