ದಾವಣಗೆರೆ: ಇಲ್ಲಿನ ಕಾಯಿಪೇಟೆಯ ಮನೆಯೊಂದರಲ್ಲಿ ಮಂಗಳವಾರ ನಸುಕಿನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಕಾಯಿಪೇಟೆ ನಿವಾಸಿ ವಿಮಲಾ (75) ಹಾಗೂ ಪುತ್ರ ಕುಮಾರ (35) ಮೃತಪಟ್ಟವರು. ಕುಟುಂಬದ ಇನ್ನೂ ನಾಲ್ವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಮುಖಂಡ ಎಚ್.ಎಂ. ರುದ್ರಮುನಿಸ್ವಾಮಿ ಎಂಬುವರಿಗೆ ಸೇರಿದ ಮನೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಆರು ಜನರ ಪೈಕಿ ನಾಲ್ವರು ಹೊರಬಂದಿದ್ದಾರೆ. ದಟ್ಟ ಹೊಗೆ ಆವರಿಸಿಕೊಂಡಿದ್ದರಿಂದ ತಾಯಿ ಮತ್ತು ಮಗ ಮನೆಯಿಂದ ಹೊರಬರಲು ಸಾಧ್ಯವಾಗಿರಲಿಲ್ಲ ಎಂದು ಬಸವನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕೊಠಡಿಯಲ್ಲಿ ಸಿಲುಕಿದ್ದ ತಾಯಿ ಮತ್ತು ಮಗನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಗಂಭೀರವಾಗಿ ಗಾಯಗೊಂಡಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.