ದಾವಣಗೆರೆ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ದಲಿತರು ಮತ್ತು ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯುವ ಹುನ್ನಾರವಾಗಿದೆ ಎಂದು ಆರೋಪಿಸಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.

ಎಸ್ಐಆರ್ ಪರಿಣಾಮವಾಗಿ ಉತ್ತರಪ್ರದೇಶದಲ್ಲಿ 2.89 ಕೋಟಿ ಹಾಗೂ ಬಿಹಾರದಲ್ಲಿ 65 ಲಕ್ಷ ಮತದಾರರು ಹಕ್ಕು ಕಳೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇದನ್ನು ಅನುಷ್ಠಾನಗೊಳಿಸುವ ಪ್ರಯತ್ನ ನಡೆಯುತ್ತಿದೆ. ಕರ್ನಾಟಕದಲ್ಲಿ ಕೂಡ ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಆತಂಕ ಸೃಷ್ಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಗೌರವಾಧ್ಯಕ್ಷ ಆನಂದಪ್ಪ ಎಸ್.ಎಲ್., ಅಧ್ಯಕ್ಷೆ ಪರ್ವಿನ್ ಬಾನು, ಪ್ರಧಾನ ಕಾರ್ಯದರ್ಶಿ ರೇಣುಕಾಯಲ್ಲಮ್ಮ, ಕಾರ್ಯದರ್ಶಿ ರೇಖಾ, ಉಪಾಧ್ಯಕ್ಷರಾದ ಬೀಬಿಜಾನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.