ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾರರ ಪಟ್ಟಿ ಪ್ರಕಟಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜತೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಕರಡು ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜ.24ರೊಳಗೆ ಸಲ್ಲಿಸಬೇಕು. ಅಂತಿಮ ಮತದಾರರ ಪಟ್ಟಿಯನ್ನು ಫೆ.14ರಂದು ಪ್ರಕಟಿಸಲಾಗುವುದು ಎಂದರು.

300ಕ್ಕಿಂತ ಕಡಿಮೆ ಮತದಾರರಿರುವ ಮತ್ತು 1,200ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ರಾಷನಲೈಸೇಷನ್ ಪ್ರಕ್ರಿಯೆಗೆ ಒಳಪಡಿಸಲಾಗುವುದು. ಈಗಾಗಲೇ 67 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಕಟ್ಟಡ ಬದಲಾವಣೆ ಕಾರಣದಿಂದ 24 ಮತಗಟ್ಟೆ ಸ್ಥಳಾಂತರ ಹಾಗೂ 2 ಮತಗಟ್ಟೆಗಳ ಹೆಸರು ಬದಲಾವಣೆ ಸೇರಿದಂತೆ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು ಒಟ್ಟು 284 ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.

ಕ್ಷೇತ್ರದ ಮತದಾರರು ತಮ್ಮ ಮತಪಟ್ಟಿ ವಿವರಗಳನ್ನು ವೋಟರ್ ಹೆಲ್ಪ್ಲೈನ್ ಆ್ಯಪ್ ಮುಖಾಂತರ ಪರಿಶೀಲಿಸಿಕೊಳ್ಳಬಹುದು. ವಿಳಾಸ ಬದಲಾವಣೆ, ಜನ್ಮ ದಿನಾಂಕ ತಿದ್ದುಪಡಿ, ಫೋಟೊ ಬದಲಾವಣೆ ಹಾಗೂ ಸ್ಥಳಾಂತರಗೊಂಡಿದ್ದಲ್ಲಿ ನಮೂನೆ-8ರಲ್ಲಿ ವೋಟರ್ ಹೆಲ್ಪ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.