ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಯಿತು.

ಮತದಾರರ ಪಟ್ಟಿ ವೀಕ್ಷಕ ಶಮ್ಲಾ ಇಕ್ಬಾಲ್ ಮಾತನಾಡಿ, ‘ಜನವರಿ 3ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸಲು ಜ. 24ರ ವರೆಗೆ ಅವಕಾಶವಿದೆ. ಜ.11 ರಂದು ನಡೆದ ವಿಶೇಷ ಅಭಿಯಾನದಲ್ಲಿ 85 ಅರ್ಜಿಗಳು ಸ್ವೀಕೃತವಾಗಿದ್ದು, ಮುಂದಿನ ಅಭಿಯಾನವು ಜ.18 ರಂದು ನಡೆಯಲಿದೆ. ಫೆಬ್ರುವರಿ 14 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಹಿಂದೆ 217 ಮತಗಟ್ಟೆಗಳಿದ್ದವು. ನಿಯಮದಂತೆ 1,200 ಕ್ಕಿಂತ ಹೆಚ್ಚು ಮತದಾರರಿರುವ ಕಡೆ ಹೊಸ ಮತಗಟ್ಟೆಗಳನ್ನು ಸೃಜಿಸಬೇಕು. ಹೀಗಾಗಿ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 24 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ವಿವರಿಸಿದರು.

‘ಪ್ರತಿಯೊಂದು ಮತಗಟ್ಟೆಯಲ್ಲೂ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿ ಪಟ್ಟಿ ನೀಡಬೇಕು. ಇದರಿಂದ ಮೃತ ಮತದಾರರ ಹೆಸರು ಕೈಬಿಡುವುದು ಮತ್ತು ವಿಳಾಸ ಬದಲಾವಣೆ ಕಾರ್ಯ ಸುಲಭವಾಗುತ್ತದೆ. ಹೊಸದಾಗಿ ಹೆಸರು ಸೇರ್ಪಡೆ ಮಾಡಲು ಹಾಗೂ ಕೈಬಿಟ್ಟು ಹೋದವರ ಹೆಸರನ್ನು ಸೇರಿಸಲು ಸಹಕರಿಸಬೇಕು’ ಎಂದರು.

ಮತದಾರರ ವಿವರ:

ಕರಡು ಪಟ್ಟಿಯಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,158 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,13,555 ಹಾಗೂ ಮಹಿಳಾ ಮತದಾರರು 1,17,603 ಇದ್ದಾರೆ.

ಕ್ಷೇತ್ರದ ಮತದಾರರ ಪಟ್ಟಿಯಲ್ಲಿನ ಲಿಂಗ ಅನುಪಾತವು 1036 ಆಗಿದ್ದು, ಇದು ಜಿಲ್ಲೆ (972) ಮತ್ತು ರಾಜ್ಯದ ಸರಾಸರಿಗಿಂತಲೂ ಹೆಚ್ಚಿದೆ. 18-19 ವಯೋಮಾನದ 1,692 ಯುವ ಮತದಾರರು ಕ್ಷೇತ್ರದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 2,544 ಅಂಗವಿಕಲ ಮತದಾರರಿದ್ದು, ಇದರಲ್ಲಿ 1,397 ಪುರುಷರು ಮತ್ತು 1,147 ಮಹಿಳೆಯರಿದ್ದಾರೆ.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.