ದಾವಣಗೆರೆ: ‘ನಗರದಲ್ಲಿ ಗುರುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ಎಫ್‌ಐಆರ್ ದಾಖಲಾಗಿದ್ದು, ಶನಿವಾರ ಮತ್ತೆ 18 ಜನರನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 48ಕ್ಕೆ ಏರಿದೆ.
‘ಮೊಬೈಲ್ ವಿಡಿಯೊ, ಸಿ.ಸಿ. ಟಿವಿ ಕ್ಯಾಮೆರಾ ದೃಶ್ಯಾವಳಿ, ಫೋಟೋಗಳ ಪರಿಶೀಲನೆ ನಡೆಸಿದ್ದು, ಇನ್ನುಳಿದ ಆರೋಪಿಗಳನ್ನೂ ಶೀಘ್ರ ಬಂಧಿಸಲಾಗುವುದು’ ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಶನಿವಾರ ಮಾಹಿತಿ ನೀಡಿದರು.