ಗುರುವಾರ , ಜನವರಿ 20, 2022
15 °C

ದಾವಣಗೆರೆ ವಿವಿಗೆ ಪ್ರೊ. ಬಣಕಾರ ನೂತನ ಕುಲಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ. ಬಸವರಾಜ ಬಣಕಾರ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಇದುವರೆಗೆ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾಗಿದ್ದ ಅವರು ಇದೀಗ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದಾರೆ. ಅವರು ಕುಲಸಚಿವರಾಗಿದ್ದ ಪ್ರೊ.ಪಿ. ಕಣ್ಣನ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ಬಣಕಾರ, ‘ವಿಶ್ವವಿದ್ಯಾಲಯವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡುವ ಉದ್ದೇಶಿತ ಗುರಿ ತಲುಪಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಂಶೋಧನೆ, ಅಧ್ಯಯನ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು’ ಎಂದರು.

ಕುಲಪತಿ ಪ್ರೊ. ಎಸ್.ವಿ. ಹಲಸೆ, ಪ್ರೊ. ಕಣ್ಣನ್, ಹಣಕಾಸು ಅಧಿಕಾರಿ ಪ್ರೊ.ಜೆ.ಕೆ. ರಾಜು, ಡೀನ್‍ಗಳಾದ ಪ್ರೊ.ಕೆ. ಬಿ.ರಂಗಪ್ಪ, ಡಾ. ವೆಂಕಟೇಶ್ ಮಾತನಾಡಿದರು. ವಿಜ್ಞಾನ ನಿಕಾಯದ ಡೀನ್ ಪ್ರೊ. ಗಾಯತ್ರಿ ದೇವರಾಜ್ ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು