ದಾವಣಗೆರೆ: ವಿಶ್ವ ಹಿಂದೂ ಪರಿಷತ್ತು ಮತ್ತು ಸಾರ್ವಜನಿಕ ವಿಜದಶಮಿ ಮಹೋತ್ಸವ ಸಮಿತಿ ವತಿಯಿಂದ ಅ.2ರಂದು ನಗರದಲ್ಲಿ ಹಮ್ಮಿಕೊಂಡಿರುವ ‘ವಿಜಯದಶಮಿ ಮೆರವಣಿಗೆ’ಯ ಮೇಲೆ ಪೊಲೀಸರು 200 ಸಿ.ಸಿ.ಟಿವಿ ಕ್ಯಾಮೆರಾಗಳ ನಿಗಾ ಇಟ್ಟಿದ್ದಾರೆ.

‘ನಗರದ ವೆಂಕಟೇಶ್ವರ ವೃತ್ತದಿಂದ ವಿಜಯದಶಮಿ ಮೆರವಣಿಗೆ ಆರಂಭವಾಗಲಿದೆ. ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಕೆಎಸ್ಆರ್ಪಿ), ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಡಿಎಆರ್) ತುಕಡಿಗಳನ್ನು ನಿಯೋಜಿಸಲಾಗಿದೆ. ಕ್ಷಿಪ್ರ ಕಾರ್ಯಪಡೆ, ದುರ್ಗಾ ಪಡೆ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಯೂ ಕಾರ್ಯನಿರ್ವಹಿಸಲಿದ್ದಾರೆ. ಡ್ರೋನ್ ಕ್ಯಾಮೆರಾ ಕೂಡ ಇರಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ನಿಗದಿಪಡಿಸಿದ ಮಾರ್ಗಗಳಲ್ಲಿಯೇ ಮೆರವಣಿಗೆ ಸಾಗಬೇಕು. ಮಾರ್ಗ ಬದಲಾವಣೆಗೆ ಯಾವುದೇ ಕಾರಣಕ್ಕೂ ಅವಕಾಶ ಇಲ್ಲ. ಪ್ರಚೋದನಕಾರಿ ಹಾಡುಗಳನ್ನು ಹಾಕುವಂತಿಲ್ಲ, ಭಿತ್ತಿಚಿತ್ರ ಪ್ರದರ್ಶಿಸುವಂತಿಲ್ಲ. ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ. ಮದ್ಯ ಹಾಗೂ ಮಾದಕ ವಸ್ತುಗಳನ್ನು ಸೇವಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತಿಲ್ಲ’ ಎಂದು ಸೂಚನೆ ನೀಡಿದ್ದಾರೆ.

‘ಮೆರವಣಿಗೆ ಹಿನ್ನೆಲೆಯಲ್ಲಿ ರೌಡಿಗಳು ಮತ್ತು ಮತೀಯ ಗೂಂಡಾಗಳಿಗೆ ಎಚ್ಚರಿಕೆಗಳನ್ನು ನೀಡಲಾಗಿದೆ. ಮೆರವಣಿಗೆಯಲ್ಲಿ ಕರ್ಕಶ ಶಬ್ದವನ್ನುಂಟು ಮಾಡುವ ಧ್ವನಿವರ್ಧಕಗಳನ್ನು ಉಪಯೋಗಿಸಬಾರದು. ಧಾರ್ಮಿಕ ನಿಂದನೆ, ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದರೆ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.