ದಾವಣಗೆರೆ: ‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಸುಮಾರು 5.53 ಲಕ್ಷ ಟನ್ ಮೆಕ್ಕೆಜೋಳ ಉತ್ಪಾದನೆಯಾಗುವ ನಿರೀಕ್ಷೆ ಇದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿಕೊಡೋಣ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಆಹಾರ ಇಲಾಖೆ, ಎಪಿಎಂಸಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈ ವರ್ಷ 1.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದೆ. ಎಲ್ಲಾ ತಾಲ್ಲೂಕುಗಳಲ್ಲಿ ಮಳೆ ಚೆನ್ನಾಗಿ ಆಗಿದೆ. ನಾವು ಹೋದ ಕಡೆಯೆಲ್ಲ ರೈತರು, ರೈತ ಮುಖಂಡರು ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹಿಸುತ್ತಿದ್ದಾರೆ. ಈಚೆಗೆ ಮುಖ್ಯಮಂತ್ರಿ ಜೊತೆಗೆ ನಡೆದ ವಿಡಿಯೊ ಕಾನ್ಫರೆನ್ಸ್ನಲ್ಲೂ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಮನವಿ ಮಾಡಿದ್ದೇನೆ. ಈ ಬಗ್ಗೆ ಪ್ರಸ್ತಾವ ಕಳುಹಿಸಿಕೊಡೋಣ. ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಪಡಿತರದಲ್ಲಿ ಮೆಕ್ಕೆಜೋಳ ವಿತರಿಸಲು ಬರುವುದಿಲ್ಲ. ಹೀಗಾಗಿ ಸರ್ಕಾರ ಖರೀದಿಸುತ್ತಿಲ್ಲ. ಆದರೆ, ಮೆಕ್ಕೆಜೋಳದಿಂದ ಬೇರೆ ಬೇರೆ ಉತ್ಪನ್ನಗಳನ್ನು ತಯಾರಿಸಬಹುದು ಎಂಬುದನ್ನು ಉಲ್ಲೇಖಿಸಿ ಪತ್ರ ಬರೆಯೋಣ’ ಎಂದು ಹೇಳಿದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ಮಂಟೆಸ್ವಾಮಿ, ‘ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ ₹ 1,850 ಬೆಂಬಲ ಬೆಲೆ ಘೋಷಿಸಿದೆ. ಆದರೆ, ಮಾರ್ಕೆಟ್ನಲ್ಲಿ ₹ 1400ಕ್ಕೆ ಮಾರಾಟ ಆಗುತ್ತಿದೆ. ಹೊಸ ಬೆಳೆ ಬಂದರೆ ದರ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಸರ್ಕಾರ ಖರೀದಿ ಆರಂಭಿಸಿದರೆ ರೈತರಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಹಾಗೂ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.