ದಾವಣಗೆರೆ: ಮುಂಗಾರು ಸಿದ್ಧತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿಡಿಯೊ ಸಂವಾದ ನಡೆಸಿದರು.

ಜಿಲ್ಲೆಯಲ್ಲಿ ಕೈಗೊಂಡ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗುತ್ತಿದ್ದು, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಕುಡಿಯುವ ನೀರು ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು ಕಲುಷಿತವಾಗದಂತೆ ನೋಡಿಕೊಂಡು ಆಗಿಂದಾಗ್ಗೆ ಕುಡಿಯುವ ನೀರಿನ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.

ರೈತರಿಗೆ ಇನ್‌ಪುಟ್ ಸಬ್ಸಿಡಿ ಬಿಡುಗಡೆ ಮಾಡಲಾಗಿದ್ದು, ಯಾವ ರೈತರಿಗೆ ತಲುಪಿಲ್ಲವೋ ಅಂತಹ ರೈತರ ದಾಖಲೆ ಸರಿಪಡಿಸುವ ಮೂಲಕ ರೈತರಿಗೆ ನೆರವಾಗಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್, ಹೆಚ್ಚುವರಿ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಬಾನು ಎಸ್. ಬಳ್ಳಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.