ಸೋಮವಾರ, ಆಗಸ್ಟ್ 2, 2021
20 °C

ಆನ್‌ಲೈನ್ ಯೋಗ ಸ್ಪರ್ಧೆಗೆ ಚಾಲನೆ ನೀಡಿದ ಡಿಸಿ, ಎಸ್‌ಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: 7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆನ್‌ಲೈನ್ ಮೂಲಕ 8 ವರ್ಷ ದಾಟಿದವರ ಯೋಗ ಸ್ಪರ್ಧೆಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಚಾಲನೆ ನೀಡಿದರು.

ವಿಡಿಯೊ ಕಾನ್ಫರೆನ್ಸ್ ಮೂಲಕ ಸ್ಫರ್ಧಿಗಳ ಯೋಗಾಸನವನ್ನು ವೀಕ್ಷಿಸಿದರು. ‘ಯೋಗಾಭ್ಯಾಸಗಳನ್ನು ಎಲ್ಲರೂ ಮತ್ತಷ್ಟು ಕರಗತ ಮಾಡಿಕೊಂಡು ಜಿಲ್ಲೆಗೆ ಕೀರ್ತಿ ತಂದುಕೊಡಬೇಕು’ ಎಂದು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲಾ ವರದಿಗಾರರ ಕೂಟ ಹಾಗೂ ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟ ಈ ಯೋಗ ಸ್ಪರ್ಧೆಯನ್ನು ಆಯೋಜಿಸಿತ್ತು.

ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಮಳಿಗೆ ಉದ್ಯಮಿ ಬಿ.ಸಿ.ಉಮಾಪತಿ, ಜಿಲ್ಲಾ ಯೋಗ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಾಸುದೇವ್ ರಾಯ್ಕರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ, ಹಾಗೂ ಆಯುಷ್ ಇಲಾಖೆ ಮತ್ತು ಯೋಗ ಒಕ್ಕೂಟದ ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು