ಬುಧವಾರ, ಜೂನ್ 16, 2021
21 °C

ಎಸ್‌.ಎಸ್. ಹೈಟೆಕ್‌ ಆಸ್ಪತ್ರೆಗೆ ಡಿ.ಸಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಸ್.ಎಸ್. ಹೈಟೆಕ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಎಂಐಸಿಯು, ಐಸೊಲೇಶನ್ ಹಾಗೂ ಐಸಿಯು ವಾರ್ಡ್‍ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಕುರಿತು ಮಾಹಿತಿ ಪಡೆದುಕೊಂಡರು.

ಎಸ್.ಎಸ್.ಆಸ್ಪತ್ರೆಯು ಕೋವಿಡ್ ಸೋಂಕಿತ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು ಹೆಚ್ಚು ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಗುಣಮುಖ ರಾದ ರೋಗಿಗಳನ್ನು ಆದಷ್ಟು ಬೇಗ ಬಿಡುಗೊಡೆಗೊಳಿಸಿ ಅಗತ್ಯವಿರುವ ಅಥವಾ ತುರ್ತು ಇರುವ ರೋಗಿಗಳಿಗೆ ಐಸಿಯು ಬೆಡ್‍ಗಳನ್ನು ನೀಡಬೇಕು. ಬೆಡ್ ವಿಸ್ತರಣೆ ಅನಿವಾರ್ಯವಾಗಿದ್ದು, ಆಸ್ಪತ್ರೆಯಲ್ಲಿ ಬೆಡ್, ಆಕ್ಸಿಜನ್ ಸೇರಿ ಎಲ್ಲಾ ಸವಲತ್ತು, ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಆಸ್ಪತ್ರೆಯಲ್ಲಿ ಆಮ್ಲಜನಕ ದುರ್ಬಳಕೆ ತಡೆಗಟ್ಟಲು ಆಕ್ಸಿಜನ್ ಆಡಿಟ್ ಮಾಡಿಸ ಲಾಗುತ್ತಿದೆ. ಇದರಿಂದ ಅನಗತ್ಯ ಬಳಕೆ ತಪ್ಪಿಸಿ ಅಗತ್ಯವಿರುವವರಿಗೆ ನೀಡ ಬಹುದು. ಎಸ್.ಎಸ್. ಆಸ್ಪತ್ರೆಯವರು ಕೂಡ ನಿತ್ಯ ಆಕ್ಸಿಜನ್ ಆಡಿಟ್ ವರದಿಯನ್ನು ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ತಿಳಿಸಿದರು.

ಎಸ್.ಎಸ್. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ. ಕಾಳಪ್ಪನವರ್ ಅವರೂ ಇದ್ದರು.

ಡಯಾಗ್ನಸ್ಟಿಕ್ ಸೆಂಟರ್‌ಗೆ ಭೇಟಿ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಹನುಮಂತರಾಯ ನಗರದ ಹೆಗಡೆ ಡಯಾಗ್ನಸ್ಟಿಕ್ ಸೆಂಟರ್‌ಗೆ ದಿಢೀರ್ ಭೇಟಿ ನೀಡಿ ಸಿಟಿ ಸ್ಕ್ಯಾನ್ ಬಗ್ಗೆ ಪರಿಶೀಲನೆ ನಡೆಸಿದರು.

ರೋಗಿಗಳು ಮತ್ತವರ ಸಂಬಂಧಿಕರೊಂದಿಗೆ ಮಾತನಾಡಿ ದರಗಳ ಬಗ್ಗೆ ವಿಚಾರಿಸಿದರು. ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ದರ ಪಡೆಯಬಾರದು ಎಂದು ಅಲ್ಲಿನ ಮುಖ್ಯಸ್ಥರು ಮತ್ತು ವೈದ್ಯರಿಗೆ ಸೂಚನೆ ನೀಡಿದರು. ದರ ವಿವರದ ಬೋರ್ಡನ್ನು ವೀಕ್ಷಿಸಿದರು.  ಪ್ರತಿ ಸ್ಕ್ಯಾನ್ ಆದ ನಂತರ ಸ್ಯಾನಿಟೈಸ್ ಮಾಡಿ ಮುಂದಿನ ಪರೀಕ್ಷೆ ನಡೆಸುವಂತೆ ತಾಕೀತು ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.