ಸೋಮವಾರ, ಫೆಬ್ರವರಿ 24, 2020
19 °C

ಮುಂದಿನ ದಿನಗಳಲ್ಲಿ ಡಿಸಿಎಂ ಅವಕಾಶ: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನನಗೂ ಉಪಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಒತ್ತಡದಲ್ಲಿ ಇದ್ದು, ಅವರಿಗೆ ಮುಜುಗರ ತರುವ ಕೆಲಸ ಮಾಡುವುದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ಡಿಸಿಎಂ ಆಗುವ ಇದೆ ಅವಕಾಶ ಮುಂದೆ ಬರುತ್ತದೆ. ವಾಲ್ಮೀಕಿ ಸಮಾಜಕ್ಕೆ ಯಡಿಯೂರಪ್ಪನವರು ಅವಕಾಶ ಕೊಡುತ್ತಾರೆ. ಅವರು ಕೊಟ್ಟ ಮಾತನ್ನು ಯಾವತ್ತೂ ತಪ್ಪುವುದಿಲ್ಲ. ನಮ್ಮ ಸಮಾಜಕ್ಕೆ ನ್ಯಾಯ ಕೊಡುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.

ಮುಂದಿನ ಎರಡು ದಿವಸ ಬಜೆಟ್ ಪೂರ್ವಭಾವಿ ಸಭೆ ಇದ್ದು, ಸಲಹಗೆಳನ್ನು ನಾವು ಕೊಡುತ್ತೇವೆ ಎಂದು ಹೇಳಿದ ಶ್ರೀರಾಮುಲು ಬಳ್ಳಾರಿ ಉಸ್ತುವಾರಿಯ ಬಗ್ಗೆ ಮೌನವಾದರು.

ಮಂಡಕ್ಕಿ ವಗ್ಗರಣೆ ಸವಿದ ಶ್ರೀರಾಮುಲು: ದಾವಣಗೆರೆಯ ಹೊರ ವಲಯದಲ್ಲಿರುವ ಶಾಮನೂರು ಆಂಜನೇಯನ ದರ್ಶನ ಪಡೆದ ಸಚಿವ ಶ್ರೀರಾಮುಲು ಪೂಜೆ ಸಲ್ಲಿಸಿದರು.

ದೇವಸ್ಥಾನದ ಹೊರಗೆ ಇರುವ ನಾಗಣ್ಣನ ಹೋಟೆಲ್‌ನಲ್ಲಿ ಮಂಡಕ್ಕಿ ಒಗ್ಗರಣೆ, ಮೆಣಸಿನಕಾಯಿ ತಿಂದರು. ಈ ವೇಳೆ ಶ್ರೀರಾಮುಲು ಅವರನ್ನು ನೋಡಲು ಸಾರ್ವಜನಿಕರು ಸೇರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು