ಭಾನುವಾರ, ಫೆಬ್ರವರಿ 23, 2020
19 °C

ಯುವತಿ ಬೆಂಕಿ ಹಚ್ಚಿದ್ದ ಪ್ರೇಮಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಚ್ಚಂಗಿದುರ್ಗ: ಪ್ರಿಯತಮೆಯೇ ಬೆಂಕಿ ಹಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಸಮೀಪದ ವಡ್ಡಿನಹಳ್ಳಿ ಗ್ರಾಮದ ಪರಸಪ್ಪ (30) ಮೃತಪಟ್ಟ ಯುವಕ. ಪರಸಪ್ಪ ಮತ್ತು ಅದೇ ಗ್ರಾಮದ ಲಕ್ಷ್ಮೀ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಚೆಗೆ ಆಕೆಗೆ ಬೇರೊಬ್ಬ ಯುವಕನ ಜತೆಗೆ ನಿಶ್ಚಿತಾರ್ಥ ನಡೆದಿತ್ತು. ಇದರಿಂದ ಕೋಪಗೊಂಡಿದ್ದ ಯುವಕ ಭಾನುವಾರ ಅವಳ ಮನೆಗೆ ಹೋಗಿ ಪ್ರಶ್ನಿಸಿದ್ದ. ಮಾತಿನ ಚಕಮಕಿ ನಡೆದಿದ್ದು, ಯುವತಿ ಸೀಮೆ ಎಣ್ಣೆ ಎರಚಿ ಬೆಂಕಿ ಹಚ್ಚಿದ್ದಳು. ಗಂಭೀರ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಅರಸೀಕೆರೆ ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು