ಗುರುವಾರ , ನವೆಂಬರ್ 26, 2020
21 °C

ವಿಚಾರಣಾಧೀನ ಕೈದಿ ಅನಾರೋಗ್ಯದಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕಳವು ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜಿಲ್ಲಾ ಬಂದಿಖಾನೆಯಲ್ಲಿದ್ದ ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರಿನ ದೇವರಾಜ್‌ (49) ಮೃತಪಟ್ಟವರು. ಒಂದು ವರ್ಷದಿಂದ ಅವರು ಜಿಲ್ಲಾ ಕಾರಾಗೃಹದಲ್ಲಿದ್ದರು. ಜ್ವರದಿಂದ ಬಳಲುತ್ತಿದ್ದ ಅವರನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಬಸವಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮ್ಯಾಜಿಸ್ಟೇಟ್‌ ತನಿಖೆ ಮುಗಿಸಿ ಮೃತದೇಹವನ್ನು ಕುಟುಂಬದವರು ಒಯ್ದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.