ಗುರುವಾರ , ಜುಲೈ 7, 2022
23 °C

ಸಫಾಯಿ ಕರ್ಮಚಾರಿಗಳಿಗೆ ಆರ್ಥಿಕ ನೆರವು ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಸಫಾಯಿ ಕರ್ಮಚಾರಿಗಳಿಗೆ, ಶೌಚಗುಂಡಿ ಶುಚಿ ಮಾಡುವವರ ಅಭಿವೃದ್ಧಿಗಾಗಿ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಲ್ಲಿ ಹಲವು ಯೋಜನೆಗಳಿವೆ. ಆದರೆ ಅವು ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಸಫಾಯಿ ಕರ್ಮಚಾರಿ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌. ಹುಲಿಗೇಶಿ ತಿಳಿಸಿದರು.

ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡುವ ಸೌಲಭ್ಯವು ಜಿಲ್ಲೆಯಲ್ಲಿ ಯಾವೊಬ್ಬ ವ್ಯಕ್ತಿಗೂ ದೊರೆತಿಲ್ಲ. 2016ರಲ್ಲಿ ವಿವಿಧ ಉದ್ದೇಶಕ್ಕಾಗಿ ಸಾಲಸೌಲಭ್ಯ ಕೋರಿ ನಿಗಮಕ್ಕೆ ಜಿಲ್ಲೆಯಿಂದ 60 ಮಂದಿ ಅರ್ಜಿ ಸಲ್ಲಿಸಿದ್ದರು. ಯಾರನ್ನೂ ಆಯ್ಕೆ ಮಾಡಿಲ್ಲ. ಶೈಕ್ಷಣಿಕ ಅಭಿವೃದ್ಧಿಗಾಗಿ ಉಚಿತ ಶಿಕ್ಷಣ ನೀಡುವ ಯೋಜನೆ ಜಾರಿಯಲ್ಲಿದೆ. ಈ ಕುರಿತು ಕಳೆದ ವರ್ಷ ಮತ್ತು ಈ ಬಾರಿ ಅರ್ಜಿ ಸಲ್ಲಿಸಿದರೂ ಮಕ್ಕಳಿಗೆ ‍ಪ್ರವೇಶಾತಿ ದೊರೆತಿಲ್ಲ ಎಂದು ಆರೋಪಿಸಿದರು.

ನಗರದಲ್ಲಿ ಮ್ಯಾನ್‌ಹೋಲ್‌ಗಳಿಗೆ ಮಾದಿಗ ಸಮುದಾಯದವರನ್ನು ಇಳಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗೆ, ಪಾಲಿಕೆ ಆಯುಕ್ತರಿಗೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಹಾಗೂ ಸಫಾಯಿ ಕರ್ಮಚಾರಿ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಜಪ್ಪ, ಸಂತೋಷ್‌, ಹರೀಶ್‌, ರಾಮಕೃಷ್ಣ, ಹಾಲೇಶ್‌, ಅನಿಲ್‌, ಮೈಲಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು