ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಹರ: ಹಿಂದುಳಿದ ವರ್ಗದವರಿಗೆ ನಿವೇಶನ ನೀಡಲು ಒತ್ತಾಯ

Published : 8 ಸೆಪ್ಟೆಂಬರ್ 2024, 15:38 IST
Last Updated : 8 ಸೆಪ್ಟೆಂಬರ್ 2024, 15:38 IST
ಫಾಲೋ ಮಾಡಿ
Comments

ಹರಿಹರ: ತಾಲ್ಲೂಕಿನ ಕಡ್ಲೆಗೊಂದಿ ಗ್ರಾಮದ ವಸತಿ ರಹಿತ ಮಾದಿಗ ಹಾಗೂ ಹಿಂದುಳಿದ ವರ್ಗದವರಿಗೆ ಶೀಘ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಆಗ್ರಹಿಸಿದರು.

ತಾಲ್ಲೂಕಿನ ಕೆ. ಬೇವಿನಹಳ್ಳಿಯ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಈಚೆಗೆ ನಡೆದ ಕಡ್ಲೆಗೊಂದಿ ಗ್ರಾಮ ಸಭೆ ನಂತರ ಮಾತನಾಡಿದರು.

ಗ್ರಾಮದ ಮಾದಿಗ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ 120 ವಸತಿ ರಹಿತ ಕುಟುಂಬಗಳಿವೆ. ಚಿಕ್ಕ ಗುಡಿಸಲುಗಳಲ್ಲಿ, ಶೀಟಿನ ಮನೆಗಳಲ್ಲಿ ಮೂಲಸೌಕರ್ಯಗಳಿಲ್ಲದೆ ಜನರು ವಾಸಿಸುತ್ತಿದ್ದಾರೆ. ಗ್ರಾಮದ ಸರ್ಕಾರಿ ಜಮೀನನ್ನು ಗ್ರಾಮ ಪಂಚಾಯಿತಿ ಗುರುತಿಸಿದ್ದು ಶೀಘ್ರ ಅಗತ್ಯ ಕ್ರಮ ಕೈಗೊಂಡು ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

‘ವಸತಿ ರಹಿತರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಕುಟುಂಬಗಳಿದ್ದರೆ ಆ ಕುರಿತು ಸ್ಥಳ ಪರಿಶೀಲನೆ ಮಾಡಿ ಹಿರಿಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಭೆಯಲ್ಲಿ ಚರ್ಚಿಸಿ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಹಾಲೇಶ್, ಉಪಾಧ್ಯಕ್ಷೆ ಮಂಜಮ್ಮ ಮಂಜಪ್ಪ, ಸದಸ್ಯರಾದ ಲೋಕೇಶ್, ಯಶೋಧಮ್ಮ, ಜಯಪ್ಪ, ಗಿರಿಗೌಡ್ರು, ಮಾತೆಂಗೆಮ್ಮ ತಿಮ್ಮಣ್ಣ, ಮಹೇಶ್ವರಪ್ಪ ಟಿ.ಕೆ., ಮುಖಂಡರಾದ ಸಂಜೀವ್, ಹನುಮಂತಪ್ಪ, ಬಸವರಾಜ್, ಪರಮೇಶ್, ಅಣ್ಣಪ್ಪ, ಸಾಕಮ್ಮ, ಲೋಕಪ್ಪ, ರಾಜಪ್ಪ, ಶೀಲಮ್ಮ, ಶಿವಪ್ಪ, ಮಲ್ಲಮ್ಮ, ರಂಗಪ್ಪ, ಲಕ್ಷ್ಮಣರೆಡ್ಡಿ, ರೇಣುಕಮ್ಮ, ಕೊಟ್ರೇಶಿ, ನಿಂಗಪ್ಪ ನಂದಿಗಾವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT