ಶುಕ್ರವಾರ, ಮೇ 20, 2022
19 °C

ದಾವಣಗೆರೆ: ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ  ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಒತ್ತಾಯಿಸಿದರು.

ತಾಲ್ಲೂಕಿನ ನೀರ್ಥಡಿ ಗ್ರಾಮದಲ್ಲಿ ಭಾನುವಾರ ಸಂಘದ ಗ್ರಾಮಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.

‘ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ 2014 ರಲ್ಲಿ ಲೋಕಸಭಾ ಚುನಾವಣೆಗಿಂತ ಮುಂಚಿತವಾಗಿ ದೇಶದ ರೈತರಿಗೆ ಸರ್ಕಾರ ಸ್ವಾಮಿನಾಥನ್ ವರದಿ ಮತ್ತು ಲೋಕಪಾಲ್ ಮಸೂದೆ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿತ್ತು.‌ಆದರೆ ಅಧಿಕಾರಕ್ಕೆ ಬಂದು‌ ಎಂಟು ವರ್ಷವಾದರೂ ವರದಿ ಜಾರಿಗೆ ಆಸಕ್ತಿ ತೋರಿಲ್ಲ’ ಎಂದರು.

ಸ್ವಾಮಿನಾಥನ್ ವರದಿ ಜಾರಿಗೆ ತಂದಿದ್ದರೆ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುತಿತ್ತು. ಆದರೆ ಎಪಿಎಂಸಿ ಕಾಯ್ದೆ ಬದಲಾವಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ಖರೀದಿದಾರರಿಗೆ ಅನುಕೂಲ ಮಾಡಿಕೊಟ್ಟಿದೆ. ಇದರಿಂದ ರೈತರು ಬೆಳೆಗಳಿಗೆ ಉತ್ತಮ‌ ಧಾರಣೆ ಸಿಗದಂತಾಗಿದೆ. ಇದರಿಂದ ಹೊರ ಬರಬೇಕಾದರೆ ರೈತರು ಸಂಘಟಿತರಾಗಿ ಕನಿಷ್ಠ ಬೆಂಬಲ ಬೆಲೆ ಕಾಯ್ದೆಗಾಗಿ ಹೋರಾಟ ಮಾಡಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಿಪ್ಪೇಶ್ ವಹಿಸಿದ್ದರು.

ಗುಮ್ಮನೂರು ಬಸವರಾಜ್, ಕೆಂಚಮ್ಮನಹಳ್ಳಿ ಹನುಂತಪ್ಪ, ತುಂಬಿಗೆರೆ ನಾಗರಾಜ್, ನೀರ್ಥಡಿ ತಿಪ್ಪೇಶ್, ಹುಚ್ಚವ್ವನಹಳ್ಳಿ ಪ್ರಕಾಶ್, ಊರಿನ ಮುಖಂಡರು , ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು