ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭತ್ತದ ಬೆಳೆಗೆ ಪರಿಹಾರಕ್ಕೆ ಆಗ್ರಹಿಸಿ ಇಂದಿನಿಂದ ಪತ್ರ ಚಳವಳಿ

Last Updated 29 ಮೇ 2020, 14:05 IST
ಅಕ್ಷರ ಗಾತ್ರ

ದಾವಣಗೆರೆ: ಕೋವಿಡ್‌–19 ಹಿನ್ನೆಲೆಯಲ್ಲಿ ಭತ್ತ ಬೆಳೆದ ರೈತ ಕುಟುಂಬಗಳಿಗೆ ₹25 ಸಾವಿರ ಪರಿಹಾರ ನೀಡಬೇಕು ಹಾಗೂ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿ ಶನಿವಾರದಿಂದ ಪತ್ರ ಚಳವಳಿ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ (ಹುಚ್ಚವನಹಳ್ಳಿ ಬಣ) ಹಾಗೂ ಹಸಿರುಸೇನೆ ರಾಜ್ಯ ಘಟಕದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮೆಕ್ಕೆಜೋಳ ಬೆಳೆದ ರೈತರಿಗೆ ಕೋವಿಡ್‌–19 ಸಂದರ್ಭದಲ್ಲಿ ₹5 ಸಾವಿರ ಪರಿಹಾರ ಘೊಷಿಸಲಾಗಿದೆ. ಆದರೆ ಭತ್ತ ಬೆಳೆದ ರೈತರನ್ನು ರಾಜ್ಯ ಸರ್ಕಾರ ಕಡೆಣಿಸಿದೆ. ಮೆಕ್ಕೆಜೋಳ ಬೆಳೆದ ರೈತರಿಗೆ ₹5 ಸಾವಿರ ಪ್ಯಾಕೇಜ್ ನೀಡುವ ಬದಲು ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ₹4 ಸಾವಿರದ ಜೊತೆಗೆ ₹ 1ಸಾವಿರ ಸೇರಿಸಿ 5 ಸಾವಿರ ಪರಿಹಾರ ನೀಡುತ್ತಿದೆ. ಆದರೆ 1 ಎಕರೆಗೆ ಮೆಕ್ಕೆಜೋಳ ಬೆಳೆಯಲು ₹15 ಸಾವಿರ ವೆಚ್ಚ ತಗಲುತ್ತದೆ. ಆದ್ದರಿಂದ ಸರ್ಕಾರ ರೈತರಿಗೆ ₹15 ಸಾವಿರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ಭತ್ತ ಬೆಳೆದ ರೈತರೂ ಸಂಕಷ್ಟದಲ್ಲಿದ್ದು, ಖರೀದಿದಾರರು ಅತ್ಯಂತ ಕಡಿಮೆ ದರದಲ್ಲಿ ಭತ್ತ ಖರೀದಿ ಮಾಡುತ್ತಿದ್ದಾರೆ. ಆದ್ದರಿಂದ ಕೇರಳ ಮಾದರಿಯಂತೆ 1 ಕ್ವಿಂಟಲ್ ಭತ್ತಕ್ಕೆ ₹540 ಬೋನಸ್‍ ನೀಡುತ್ತಿದೆ. ಕೇಂದ್ರ ಸರ್ಕಾರ ₹1,830 ಹಾಗೂ ರಾಜ್ಯ ಸರ್ಕಾರ ಬೋನಸ್ ರೂಪದಲ್ಲಿ ₹1500 ನೀಡಬೇಕು’ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

‘ಶನಿವಾರ ಸಾಂಕೇತಿಕವಾಗಿ ಪತ್ರ ಚಳವಳಿ ಪ್ರಾರಂಭಗೊಳ್ಳಲಿದೆ. ಸಾವಿರಾರು ರೈತರು ಪತ್ರ ಬರೆದು ಮುಖ್ಯಮಂತ್ರಿಗೆ ಪೋಸ್ಟ್ ಮಾಡುವ ಮೂಲಕ ಸರ್ಕಾರಕ್ಕೆ ಮನವಿ ಮಾಡಲಿದ್ದೇವೆ. ಈಗಾಗಲೇ ಶೇ 40ರಷ್ಟು ಭತ್ತ ಮಾರಾಟವಾಗಿದ್ದು, ಉಳಿದಿರುವ ಶೇ60 ರಷ್ಟು ಭತ್ತಕ್ಕೆ ಪರಿಹಾರ ನೀಡಬೇಕು. ಕೇರಳ ಮಾದರಿ ಬೋನಸ್ ಹಾಗೂ ಭತ್ತಕ್ಕೆ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಪತ್ರ ಬರೆಯಲಿದ್ದೇವೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಆಲೂರು ಪರಶುರಾಮ, ಕಾಡಜ್ಜಿ ಪ್ರಕಾಶ್, ಭಗತ್‍ಸಿಂಹ ಚಿಕ್ಕಬೂದಿಹಾಳ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT