ಶುಕ್ರವಾರ, ಜೂಲೈ 10, 2020
22 °C

ನರ್ಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಮಹಿಳೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಗೊಂಡಿರುವ ನರ್ಸ್ ವಿರುದ್ಧ ಅವಹೇಳನಕಾರಿ ಬರಹ ಬರೆದ ಆರೋಪದ ಮೇರೆಗೆ ‘ವಂದು ವಾಣಿ’ (Vandu vani) ಫೇಸ್‌ಬುಕ್ ಖಾತೆದಾರರಾದ ಮಂಜುಳಾ ಅವರನ್ನು ಸಿಇಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನಿಟುವಳ್ಳಿಯವರಾದ ಮಂಜುಳಾ ಅವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮಾಹಿತಿ ಆಧರಿಸಿ ಅವರನ್ನು ಬಂಧಿಸಲಾಗಿದೆ ಎಂದು ಎಸ್‌.ಪಿ.ಹನುಮಂತರಾಯ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ಅವಹೇಳನಕಾರಿಯಾಗಿ ಬರಹ ಬರೆದು ಅವಾಚ್ಯ ಶಬ್ಧಗಳಿಂದ ನಿಂದಿಸಲಾಗಿತ್ತು. ಈ ಕುರಿತು ಕ್ರಮ ಕೈಗೊಳ್ಳುವಂತೆ ನರ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ಆಧರಿಸಿ ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು