ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊರೊನಾ ಮಧ್ಯೆಯೂ ಅಭಿವೃದ್ಧಿ’; ಶಾಸಕ ಎಸ್‌.ವಿ. ರಾಮಚಂದ್ರ

Last Updated 16 ಆಗಸ್ಟ್ 2021, 3:37 IST
ಅಕ್ಷರ ಗಾತ್ರ

ಜಗಳೂರು: ಕೊರೊನಾ ಬಿಕ್ಕಟ್ಟಿನ ನಡುವೆಯೂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ₹ 130.59 ಕೋಟಿ ವೆಚ್ಚದ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅಭಿವೃದ್ಧಿ ಯೋಜನೆಗಳಿಗೆ ಹಿನ್ನಡೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎಸ್‌.ವಿ. ರಾಮಚಂದ್ರ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 75 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಶೀಲ್ದಾರ್ ಡಾ.ನಾಗವೇಣಿ ಧ್ವಜಾರೋಹಣ ನೆರವೇರಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಆರ್. ತಿಪ್ಪೇಸ್ವಾಮಿ, ಉಪಾಧ್ಯಕ್ಷೆ ಲಲಿತಾ ಶಿವಣ್ಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸಿದ್ದೇಶ್, ಎಪಿಎಂಸಿ ಅಧ್ಯಕ್ಷ ರೇಣುಕಾನಂದ, ತಾಲ್ಲೂಕು ಪಂಚಾಯಿತಿ ಇಒ ಲಕ್ಷ್ಮೀಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT