ಧಾರ್ಮಿಕ ಕ್ಷೇತ್ರದಲ್ಲಿ ಧರ್ಮಸ್ಥಳದ ಕಾರ್ಯ ದೊಡ್ಡದು. ಇದನ್ನು ಸಹಿಸದ ಶಕ್ತಿಗಳು ಅಪಪ್ರಚಾರ ಮಾಡುವ ಹುನ್ನಾರ ನಡೆಸುತ್ತಿವೆ. ವೀರೇಂದ್ರ ಹೆಗ್ಗಡೆ ಅವರ ತೇಜೋವಧೆ ಸಲ್ಲದು
ಮಹಾಂತ ರುದ್ರೇಶ್ವರ ಸ್ವಾಮೀಜಿ, ಹೆಬ್ಬಾಳ ಮಠ
ಹಿಂದೂ ಧರ್ಮೀಯರ ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ 800 ವರ್ಷಗಳ ಇತಿಹಾಸವಿದೆ. ಕ್ಷೇತ್ರದ ಮೇಲೆ ಮಾಡುತ್ತಿರುವ ಆರೋಪದಿಂದ ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ
ಪಿ. ಉಷಾ, ಭಕ್ತೆ
ಧರ್ಮಸ್ಥಳದ ಮಂಜುನಾಥ ಸ್ವಾಮಿ ಕ್ಷೇತ್ರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಂಚಿಕೊಳ್ಳುತ್ತಿರುವುವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಭಕ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.#davanagerepic.twitter.com/JuzteoZdZL