ಸೋಮವಾರ, ನವೆಂಬರ್ 30, 2020
24 °C

ಪಾಲಿಕೆ ನಿಯೋಗದಿಂದ ಮುಖ್ಯಮಂತ್ರಿಯೊಂದಿಗೆ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ನಗರದ ಅಭಿವೃದ್ಧಿಗೆ ₹ 125 ಕೋಟಿ ವಿಶೇಷ ಅನುದಾನವನ್ನು ನೀಡಲು ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದು ಮೇಯರ್ ಬಿ.ಜಿ. ಅಜಯ್ ಕುಮಾರ್ ತಿಳಿಸಿದ್ದಾರೆ.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್ ನೇತೃತ್ವದಲ್ಲಿ ಮಹಾನಗರ ಪಾಲಿಕೆ ನಿಯೋಗ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ‘ಮನೆ ಬಾಗಿಲಿಗೆ ಮಹಾನಗರ ಪಾಲಿಕೆ’ ಕಾರ್ಯಕ್ರಮದ ಉದ್ಘಾಟನೆಗೆ ಅವರನ್ನು ಆಹ್ವಾನಿಸಿತು.

ನಗರದ 45 ವಾರ್ಡ್‌ಗಳ ಅಭಿವೃದ್ಧಿಗಾಗಿ ತಲಾ ₹ 1 ಕೋಟಿಯಂತೆ ₹ 45 ಕೋಟಿ ವಿಶೇಷ ಅನುದಾನವನ್ನು ಪಾಲಿಕೆಗೆ ನೀಡುವಂತೆ ಮನವಿ ಮಾಡಲಾಯಿತು. ಮಹಾತ್ಮ ಗಾಂಧಿ ಗ್ರಾಮ ವಿಕಾಸ ಯೋಜನೆಯಡಿ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ₹ 125 ಕೋಟಿ ಒದಗಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು. ನಗರಾಭಿವೃದ್ಧಿಗೆ ವಿಶೇಷ ಅನದಾನ ಮುಂದಿನ ದಿನಗಳಲ್ಲಿ ಒದಗಿಸುವುದಾಗಿ ಭರವಸೆ ನೀಡಿದರು ಎಂದು ಮೇಯರ್‌ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಟಿ. ವೀರೇಶ್, ಪ್ರಸನ್ನ ಕುಮಾರ್, ಸದಸ್ಯರು, ಆಯುಕ್ತರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು